ಕಡಬ: ಇಬ್ಬರಲ್ಲಿ ಕೊರೊನಾ ಪಾಸಿಟಿವ್!

ಕಡಬ: ತಾಲೂಕು ವ್ಯಾಪ್ತಿಯಲ್ಲಿ ಇಂದು ಎರಡು ಕೊರೋನ ಪ್ರಕರಣಗಳು ಪತ್ತೆಯಾಗಿವೆ ಎಂದು ಪುತ್ತೂರು ತಾಲೂಕು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಕುಟ್ರುಪ್ಪಾಡಿ ನಿವಾಸಿಯಾಗಿರುವ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 35 ವರ್ಷ ಪ್ರಾಯದ ವ್ಯಕ್ತಿಯಲ್ಲಿ ಕೊರೋನ ಸೋಂಕು ದೃಢಪಟ್ಟಿದೆ. ಸೋಂಕಿನಿಂದ ಇಂದು ಮೃತಪಟ್ಟ ಕೂರ್ನಡ್ಕ ನಿವಾಸಿ ಮಹಿಳೆಯ ಸಂಬಂಧಿ ಆಲಂಕಾರು ನಿವಾಸಿ 42 ವರ್ಷ ವಯಸ್ಸಿನ ಮಹಿಳೆಯೊಬ್ಬರಲ್ಲೂ ಸೋಂಕು ದೃಢಪಟ್ಟಿದೆ. ಇವರು ನಾಲ್ಕು ದಿನಗಳ ಹಿಂದೆ ಜಿಲ್ಲಾ ಕೋವಿಡ್ ಆಸ್ಪತ್ರೆಯಾಗಿರುವ ಮಂಗಳೂರಿನ ವೆನ್‍ಲಾಕ್ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು. ಗಂಟಲು ದ್ರವ ಪರೀಕ್ಷಾ ವರದಿ ಬಂದಿದ್ದು ಕೊರೋನ ದೃಢಪಟ್ಟಿದೆ.
ಮಹಾಮಾರಿ ಕೊರೋನ ವೈರಸ್ ಗೆ ಪುತ್ತೂರಿನಲ್ಲಿ ಪ್ರಥಮ ಬಲಿಯಾಗಿದ್ದು ಕೂರ್ನಡ್ಕದ ನಿವಾಸಿ 32 ವರ್ಷದ ಬಾಣಂತಿ ಇಂದು ಮಂಗಳೂರಿನ ಕೋವಿಡ್-19 ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ವಾರ ಮಹಿಳೆಗೆ ಕೊರೋನಾ ಸೋಂಕು ತಗಲಿತ್ತು. ಇದರ ಪರಿಣಾಮ ಹಸಿಗೂಸಿಗೂ ಸೋಂಕು ತಗಲಿದ್ದು ಮಗು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದೆ. ಮಹಿಳೆಯ ಅಂತ್ಯಕ್ರಿಯೆ ಕೂರ್ನಡ್ಕ ಮಸೀದಿಗೊಳಪಟ್ಟ ದಫನ ಭೂಮಿಯಲ್ಲಿ ನಡೆದಿದೆ.

Leave a Reply

Your email address will not be published. Required fields are marked *