ಕಡಿದು ಬಿದ್ದ ವಿದ್ಯುತ್ ತಂತಿ ಸ್ಪರ್ಷಿಸಿ ರೈತ ಸಾವು

ಮಂಗಳೂರು: ಗದ್ದೆಯಲ್ಲಿ ಕೆಲಸ‌ ಮಾಡುತ್ತಿದ್ದಾಗ ಕಡಿದುಬಿದ್ದ ತಂತಿ ಸ್ಪರ್ಷಿಸಿ ರೈತರೊಬ್ಬರು ದುರಂತ ಸಾವನ್ನಪ್ಪಿದ್ದಾರೆ.

ಇವರು ಚೇರ್ಕಾಡಿಯಲ್ಲಿ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ವಿದ್ಯುತ್ ತಂತಿ ಕಡಿದುಬಿದ್ದಿದ್ದು ಅದನ್ನು ತಿಳಿಯದೆ ಸ್ಪರ್ಷಿಸಿದ ರೈತ ಸಾವನ್ನಪ್ಪಿದ್ದಾಗಿ ತಿಳಿದುಬಂದಿದೆ.

ಇವರು ಮುದ್ರಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮಿ ಯವರ ತಂದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *