ಕನ್ನಡದ ಹಿರಿಯ ನಟಿ ಶಾಂತಮ್ಮ ಇನ್ನಿಲ್ಲ

ಮೈಸೂರು: ಕನ್ನಡ ಸಿನಿಮಾರಂಗದ ಹಿರಿಯ ನಟಿ ಶಾಂತಮ್ಮ ನಿಧನರಾಗಿದ್ದಾರೆ. ಶಾಂತಮ್ಮ ಅವರಿಗೆ 95 ವರ್ಷ ವಯಸ್ಸಾಗಿತ್ತು . ಶನಿವಾರ ಎದೆ ನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಸಂಜೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಮೈಸೂರಿನ ಮಗಳ ಮನೆಯಲ್ಲಿ ಶಾಂತಮ್ಮ ಇದ್ದರು. ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಂಜೆ ಹಿರಿಯ ನಟಿ ಸಾವನಪ್ಪಿದ್ದಾರೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸುಮಾರು 500 ಕ್ಕೂ ಹೆಚ್ಚು ಸಿನಿಮಾದಲ್ಲಿ ಅಭಿನಯಿಸಿದ್ದರು. ಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿ ದಕ್ಷಿಣ ಭಾರತದ ಎಲ್ಲ ಚಿತ್ರರಂಗದಲ್ಲಿಯೂ ಹೆಸರು ಮಾಡಿದ್ದರು.

Leave a Reply

Your email address will not be published. Required fields are marked *