ಕರಾವಳಿಯಲ್ಲಿ ಯೆಲ್ಲೋ ಅಲರ್ಟ್, ಭಾರೀ ಮಳೆ ಸಾಧ್ಯತೆ!

ಮಂಗಳೂರು: ಇಂದಿನಿಂದ ಜು.11ರವರೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂಬುದಾಗಿ ಹವಾಮಾನ ಇಲಾಖೆ ಹೇಳಿದೆ. ಆಗ್ನೇಯ ಅರಬ್ಬಿ ಸಮುದ್ರದಿಂದ ಗಂಟೆಗೆ ಸುಮಾರು 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು ಮೀನುಗಾರರು ಸಮುದ್ರಕ್ಕಿಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಜು. 10ರಿಂದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣವು ಅಧಿಕವಾಗಲಿದ್ದು, ಮುಂದಿನ 48 ಗಂಟೆಗಳವರೆಗೆ ಕೆಲವೆಡೆ ಸಾಧಾರಣ ಮಳೆಯಾಗಬಹುದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *