ಕೇರಳ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಸ್ವಪ್ನಾ ಸುರೇಶ್ ಅರೆಸ್ಟ್!

ಬೆಂಗಳೂರು: ಕೇರಳ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ಗೋಲ್ಡ್ ಸ್ಮಗ್ಲಿಂಗ್ ಕೇಸ್ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್‌ಳನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಆಕೆಯನ್ನು ಬಂಧಿಸಿದ್ದಾರೆ.
ವರದಿಗಳ ಪ್ರಕಾರ ನಾಲ್ಕನೇ ಆರೋಪಿ ಸಂದೀಪ್‌ ನಾಯರ್‌ ಕೂಡ ಬಂಧಿತನಾಗಿದ್ದಾನೆ. ಇಬ್ಬರನ್ನೂ ಇಂದು ಕೊಚ್ಚಿಗೆ ಕರೆದೊಯ್ಯಲಾಗುತ್ತದೆ. ಎನ್‌ಐಎ ಅಧಿಕಾರಿಗಳು ಮೊದಲಿಗೆ ಸ್ವಪ್ನಾ ವಿಚಾರಣೆ ನಡೆಸಲಿದ್ದಾರೆ, ನಂತರ ಹೆಚ್ಚಿನ ವಿಚಾರಣೆಗೆ ಕಸ್ಟಮ್ಸ್‌ ಅಧಿಕಾರಿಗಳಿಗೆ ಹಸ್ತಾಂತರಿಸಲಿದ್ದಾರೆ.
ಯುಎಇ ಧೂತಾವಾಸ ಕಚೇರಿಯ ಮಾಜಿ ಉದ್ಯೋಗಿ ಸ್ವಪ್ನಾಳನ್ನು ಬೆಂಗಳೂರಿನ ಖಾಸಗಿ ಹೋಟೆಲ್‌ ಒಂದರಿಂದ ಬಂಧಿಸಲಾಗಿದೆ. ಬಂಧನದ ವೇಳೆ ಆಕೆಯ ಪತಿ ಹಾಗೂ ಪುತ್ರಿ ಜೊತೆಗಿದ್ದರು ಎಂದು ತಿಳಿದು ಬಂದಿದೆ. ಫೋನ್‌ ಕಾಲ್‌ ಬೆನ್ನತ್ತಿ ಎನ್‌ಐಎ ಅಧಿಕಾರಿಗಳು ಆಕೆಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *