ಕೊರೊನಾಗೆ ಮೂಡಬಿದ್ರೆಯ ವ್ಯಕ್ತಿ ಬಲಿ, ಸಾವಿನ ಸಂಖ್ಯೆ 26ಕ್ಕೇರಿಕೆ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಇಂದು ಮತ್ತೋರ್ವ ಸಾವನ್ನಪ್ಪಿದ್ದು ಸಾವಿನ ಸಂಖ್ಯೆ 26ಕ್ಕೇರಿಕೆಯಾಗಿದೆ. ಮೂಡಬಿದ್ರೆ ನಿವಾಸಿ ಕೊರೊನಾ ಸೋಂಕಿತರಾಗಿದ್ದು ಕೆಲದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು.
ಇಂದು ಉಸಿರಾಟದ ಸಮಸ್ಯೆಯಿಂದಾಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ.