ಕೊರೊನಾ ಅಟ್ಟಹಾಸದ ಮಧ್ಯೆ ದೆಹಲಿ-ಮುಂಬೈಗರಿಗೆ ಮಳೆ ಕಾಟ!

ಮುಂಬೈ: ಕೊರೊನಾ ವೈರಸ್ ಅಟ್ಟಹಾಸದ ನಡುವೆ ರಾಜಧಾನಿ ನವದೆಹಲಿಯಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ 2 ಗಂಟೆಗಳಲ್ಲಿ ಖುರ್ಜಾ, ಬುಲಂದ್ಶಹರ್, ಜಂಗೀರಾಬಾದ್, ಗ್ರೇಟರ್ ನೋಯ್ಡಾ, ಗುಲೋಟಿ, ಸಿಯಾನಾ ಮತ್ತು ನರೋರಾದ ಪ್ರದೇಶಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.
ಮಹಾರಾಷ್ಟ್ರದಲ್ಲಿ ವರುಣನ ಹೊಡೆತಕ್ಕೆ ಜನಜೀವನ ತತ್ತರಿಸಿ ಹೋಗಿದೆ. ಮುಂಬೈನಲ್ಲಿ ಇಂದು ಕೂಡಾ ಮಳೆಯಾಗುವ ನಿರೀಕ್ಷೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಮುಂಬೈ, ಥಾಣೆ ಮತ್ತು ಪಾಲ್ಘರ್ ಪ್ರದೇಶದಲ್ಲಿ ಇನ್ನೂ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಮೂರು ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರೆಡ್ ಅಲರ್ಟ್ ಘೋಷಸಲಾಗಿದೆ. ಭಾರೀ ಮಳೆಯಿಂದ ಮುಂಬೈನಲ್ಲಿ ರಸ್ತೆಗಳೆಲ್ಲ ಜಲಾವೃತಗೊಂಡಿದ್ದು, ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗುತ್ತಿದೆ. ಮನೆಗಳಿಂದ ಜನರು ಹೊರ ಬರುವುದಕ್ಕೂ ಆಗದಂತಾ ಪರಿಸ್ಥಿತಿ ನಿರ್ಮಾಣವಾಗಿದೆ.