ಕೊರೊನಾ ವಿರುದ್ಧ ಹೋರಾಟದ ಮುಂಚೂಣಿಯಲ್ಲಿದ್ದ ಮ್ಯಾಜಿಸ್ಟ್ರೇಟ್ ಕೊರೊನಾಗೆ ಬಲಿ!

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಹೂಗ್ಲಿ ಜಿಲ್ಲೆಯ ಚಂದನನಗರ್ ಉಪವಿಭಾಗದ ಜಿಲ್ಲಾ ಮ್ಯಾಜಿಸ್ಟ್ರೇಟ್, 38 ವರ್ಷದ ದೇಬದತ್ತ ರಾಯ್ ಅವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ದೇಬದತ್ತ ರಾಯ್ ಪತಿ ಹಾಗೂ ನಾಲ್ಕು ವರ್ಷದ ಪುತ್ರನನ್ನು ಅಗಲಿದ್ದಾರೆ. ಕೆಲದಿನಗಳ ಹಿಂದೆ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಕೊಲ್ಕತ್ತಾದ ಡಮ್ ಡಮ್ ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ಗೃಹ ಕ್ವಾರಂಟೈನಿನಲ್ಲಿರಲು ಸಲಹೆ ನೀಡಲಾಗಿತ್ತು.
ರವಿವಾರ ಉಸಿರಾಟದ ತೀವ್ರ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಸೇರಂಪೋರ್ನ ಶ್ರಮಜೀಬಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಹೂಗ್ಲಿ ಜಿಲ್ಲೆಗೆ ವಲಸಿಗ ಕಾರ್ಮಿಕರನ್ನು ಹೊತ್ತು ಬರುತ್ತಿದ್ದ ರೈಲುಗಳು ಹಾಗೂ ಕಾರ್ಮಿಕರ ಶಿಬಿರಗಳ ಉಸ್ತುವಾರಿಯನ್ನು ಅವರಿಗೆ ವಹಿಸಲಾಗಿತ್ತು.

Leave a Reply

Your email address will not be published. Required fields are marked *