ಕೋಟಾ ಬಹಳ ಸಜ್ಜನರು, ಅವರು ಸಿಎಂ ಆಗಲಿ: ಶರವಣ

ಬೆಂಗಳೂರು: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಬಹಳ ಸಜ್ಜನರು. ಅವರು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಆಗಲಿ ಎಂದು ಹಾರೈಸುತ್ತೇನೆ ಎಂದು ಜೆಡಿಎಸ್‌ ನಾಯಕ ಟಿ.ಎ ಶರವಣ ಹೇಳಿದ್ದಾರೆ. ನಿನ್ನೆ ವಿಧಾನಸೌಧದಲ್ಲಿ ಅವಧಿ ಪೂರ್ಣಗೊಳಿಸಿದ 15 ಮಂದಿ ವಿಧಾನ ಪರಿಷತ್ ಸದಸ್ಯರಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಅವರು ಮಾತನಾಡುತ್ತಿದ್ದರು.
ನಾನು ಮತ್ತೆ ಪುನರಾಯ್ಕೆ ಆಗುತ್ತೇನೆಂಬ ನಿರೀಕ್ಷೆ ಇತ್ತು. ಆದರೆ ನಿರಾಸೆ ಆಗಿದೆ. ಕೋಟಾ ಶ್ರೀನಿವಾಸ ಪೂಜಾರಿ ಅವರು ಬಹಳ ಸಜ್ಜನರು. ಅವರು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಆಗಲಿ ಎಂದು ಹಾರೈಸುತ್ತೇನೆ. ಈ ಸಂದರ್ಭದಲ್ಲಿ ನನಗೆ ಸಹಕಾರ ಕೊಟ್ಟ ಎಲ್ಲರಿಗೂ ಪಕ್ಷಾತೀತವಾಗಿ ಧನ್ಯವಾದಗಳು ಎಂದು ಶರವಣ ತಿಳಿಸಿದರು. ಈ ವೇಳೆ ಮಾತನಾಡಿದ ತಿಪ್ಪಣ್ಣ ಕಮಕನೂರು, ಹಿಂದುಳಿದ ಸಮುದಾಯದಿಂದ ಬಂದ ನನಗೆ ಉತ್ತಮ ಅವಕಾಶ ದೊರಕಿಸಿ ಕೊಟ್ಟಿದ್ರಿ. ನನಗೆ ತಂದೆ ಇಲ್ಲ. ಸಭಾಪತಿಗಳನ್ನು ತಂದೆ ಸ್ಥಾನದಲ್ಲಿ ನೋಡಿದ್ದೇನೆ. ಕೋಟಾ ಶ್ರೀನಿವಾಸ್ ಪೂಜಾರಿಯನ್ನು ಸೋದರನ ಸ್ಥಾನದಲ್ಲಿ ನೋಡಿದ್ದೇನೆ ಎಂದು ಹೇಳುತ್ತಾ ಭಾವುಕರಾದರು. ಜಯಮಾಲ, ತಿಪ್ಪಣ್ಣ ಕಮಕನೂರು, ಶರಣಪ್ಪ ಮಟ್ಟೂರು, ಜಯಮ್ಮ, ಬೋಸರಾಜ್, ಎಚ್.ಎಂ.ರೇವಣ್ಣ, ಟಿಎ ಶರವಣ, ಎಂಸಿ ವೇಣುಗೋಪಾಲ್‍ಗೆ ಶಾಲು ಹೊದಿಸಿ, ನೆನಪಿನ ಕಾಣಿಕೆ ನೀಡಿದ ಬೀಳ್ಕೊಡಲಾಯಿತು. ಬೀಳ್ಕೊಡುಗೆ ಸಮಾರಂಭದಲ್ಲಿ 8 ಮಂದಿ ನಿವೃತ್ತ ಪರಿಷತ್ ಸದಸ್ಯರು ಮಾತ್ರ ಇದ್ದರು. ಉಳಿದ 8 ಜನರು ಕಾರ್ಯಕ್ರಮಕ್ಕೆ ಗೈರಾಗಿದ್ದರು. ಕಾರ್ಯಕ್ರಮದಲ್ಲಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ, ಸಭಾ ನಾಯಕ ಕೋಟಾ ಶ್ರೀನಿವಾಸ ಪೂಜಾರಿ, ವಿಪಕ್ಷ ನಾಯಕ ಎಸ್.ಆರ್ ಪಾಟೀಲ್, ವಿಪಕ್ಷ ಸಚೇತಕ ನಾರಾಯಣಸ್ವಾಮಿ ಸೇರಿ ಹಲವರು ಭಾಗಿಯಾಗಿದ್ದರು. ಅಲ್ಲದೆ ಶರವಣ, ಜಯಮಾಲ, ಜಯಮ್ಮ, ರೇವಣ್ಣ, ಶರಣಪ್ಪ ಮಟ್ಟೂರು, ಬೋಸರಾಜು ಸೇರಿ ಹಲವು ನಿವೃತ್ತಿ ಹೊಂದಿದ ಪರಿಷತ್ ಸದಸ್ಯರು ಕೂಡ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *