ಕೋವಿಡ್ ನಿರ್ವಹಣೆಯಲ್ಲಿ ಸರಕಾರ ವಿಫಲ: ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು: ಕೋವಿಡ್ 19 ನಿರ್ವಹಿಸುವಲ್ಲಿ ರಾಜ್ಯ ಸರಕಾರ, ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ. ಕೋವಿಡ್ ಚಿಕಿತ್ಸೆಗೆ ನಿರಾಕರಿಸಿದ ಖಾಸಗಿ ಆಸ್ಪತ್ರೆಗಳ ಮೇಲೆ ಕ್ರಮ ತೆಗೆದುಕೊಳ್ಳುವುದಕ್ಕೂ ಸರಕಾರದ ಕೈಯಲ್ಲಿ ಆಗುತ್ತಿಲ್ಲ ಎಂದು ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆ ಎದುರುಗಡೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಾಯಕರು ಮೌನ ಪ್ರತಿಭಟನೆ ನಡೆಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ಮಾಡಿದ ಖರ್ಚಿನ ಲೆಕ್ಕ ಕೊಡಬೇಕು ಎಂದು ಆಗ್ರಹಿಸಿದ ಕಾಂಗ್ರೆಸ್ ನಾಯಕರು, ಜಿಲ್ಲಾಡಳಿತದ ತಪ್ಪು ನೀತಿಯೇ 60ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣ. ಸೋಂಕು ನಿರ್ವಹಿಸಲು ಜಿಲ್ಲಾಡಳಿತ ವಿಫಲವಾಗಿದೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಮಾಜಿ ಸಚಿವ ರಮಾನಾಥ ರೈ, ಶಾಸಕ ಯು.ಟಿ ಖಾದರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕರಾದ ಜೆ.ಅರ್ ಲೋಬೊ, ಮೊಯ್ದಿನ್ ಬಾವ ಮತ್ತಿತರ ಮುಖಂಡರು ಪಾಲ್ಗೊಂಡಿದ್ದರು.