ಗಾಬರಿ ಬೇಡ, ಯುದ್ಧ ನಡೆಯಲ್ಲ: ಕೋಡಿಮಠಶ್ರೀ

ಹಾಸನ: ಭಾರತ-ಚೀನಾ ನಡುವೆ ಗಲ್ವಾನ್ ಕಣಿವೆಯಲ್ಲಿ ನಡೆದ ಸಂಘರ್ಷದ ನಂತರ ಎರಡೂ ದೇಶಗಳ ನಡುವೆ ಸದ್ಯ ಬೂದಿ ಮುಚ್ಚಿದ ಕೆಂಡದ ರೀತಿಯ ಸ್ಥಿತಿಯಿದೆ. ಅಲ್ಲದೆ ಪಾಕ್ ಆಕ್ರಮಿತ ಪ್ರದೇಶದಲ್ಲಿ ಪಾಕ್ ತನ್ನ ಸೇನೆ ಜಮಾವಣೆ ಮಾಡುತ್ತಿದೆ ಎಂಬ ಮಾಹಿತಿ ಕೂಡ ಇದೆ. ಆದರೆ ನಡುವೆ ಪ್ರತಿಕ್ರಿಯೆ ನೀಡಿರುವ ಕೋಡಿ ಮಠದ ಸ್ವಾಮೀಜಿ, ಸದ್ಯ ಯಾವುದೇ ಯುದ್ಧ ನಡೆಯಲ್ಲ. ಜನರು ಗಾಬರಿಯಾಗುವ ಅವಶ್ಯಕತೆ ಇಲ್ಲ ಎಂದು ಭವಿಷ್ಯ ನುಡಿದಿದ್ದಾರೆ.
ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನಲ್ಲಿರುವ ಕೋಡಿಮಠದಲ್ಲಿ ಮಾತನಾಡಿದ ಶ್ರೀಗಳು, ಮನುಷ್ಯ ಸ್ವಾರ್ಥದಿಂದ ತಂದುಕೊಳ್ಳುತ್ತಿರುವ ಈ ರೋಗ ಕೇವಲ ಮನುಕುಲ ಅಲ್ಲದೆ ಪ್ರಾಣಿ, ಪಕ್ಷಿ, ವೃಕ್ಷಗಳ ಮೇಲೆ ಬರುವ ಅವಕಾಶವಿದೆ. ಆದರೂ ಇದು ವಿಶಾಲಬುದ್ಧಿಯಿಂದ ಹೋಗಿ ಮನುಷ್ಯರಿಂದಲೇ ಹುಷಾರಾಗುವ ಲಕ್ಷಣ ಇದೆ. ಈ ರೋಗ ತಡೆಯಲು ಸ್ವಚ್ಛತೆ ಬಹಳ ಮುಖ್ಯ. ನಮ್ಮಲ್ಲಿ ಅನೇಕ ಮದ್ದು, ಅನೇಕ ವೈದ್ಯರಿದ್ದಾರೆ. ಇದು ಯಾವುದೇ ಮಟ್ಟಕ್ಕೆ ಹೋದರೂ ಹೆದರುವ ಅವಶ್ಯಕತೆ ಇಲ್ಲ. ಅಲ್ಲದೆ ಸದ್ಯದ ಸ್ಥಿತಿಯಲ್ಲಿ ಯಾವುದೇ ಯುದ್ಧ ನಡೆಯುವ ಸಂಭವ ಇಲ್ಲ. ಯಾರೂ ಕೂಡ ಆತಂಕಕ್ಕೆ ಸಿಲುಕಬಾರದು ಎಂದು ಶ್ರೀಗಳು ಧೈರ್ಯದ ಮಾತುಗಳನ್ನು ಹೇಳಿದ್ದಾರೆ.

Leave a Reply

Your email address will not be published. Required fields are marked *