ಚಿಕ್ಕಮಗಳೂರು-ಉ.ಕ. ಜಿಲ್ಲೆಯಲ್ಲೂ ಕೊರೊನಾಗೆ ಇಬ್ಬರು ಬಲಿ!

ಚಿಕ್ಕಮಗಳೂರು: ಇಂದು ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಸೋಂಕಿಗೆ ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್)ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 77 ವರ್ಷದ ವೃದ್ಧೆ ತಡರಾತ್ರಿ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಲ್ಲಿನ ಸಿವಿಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೋನ ಲಕ್ಷಣ ಕಂಡುಬಂದಿದ್ದರಿಂದ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಕೋವಿಡ್ ವರದಿ ಪಾಸಿಟಿವ್ ಬಂದಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಾರವಾರದ ಹೈಚರ್ಚ್ ಬಳಿಯ ಸ್ಮಶಾನದಲ್ಲಿ ಮಹಿಳೆಯ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ದಾಗ ಸ್ಥಳೀಯರು ಅಡ್ಡಿ ಮಾಡಿದ್ದರು. ಲಘು ಲಾಠಿ ಚಾರ್ಜ್ ಮಾಡಿ ಜನರನ್ನು ಚದುರಿಸಿದ ಬಳಿಕ ಅಲ್ಲೇ ಅಂತ್ಯಸಂಸ್ಕಾರ ನಡೆಸಲಾಗಿದೆ.

Leave a Reply

Your email address will not be published. Required fields are marked *