ಚಿಕ್ಕಮಗಳೂರು: ಬಿಜೆಪಿ ಎಂಎಲ್ಸಿ, ಪತ್ನಿಯಲ್ಲಿ ಕೊರೊನಾ ಸೋಂಕು

ಚಿಕ್ಕಮಗಳೂರು: ಜಿಲ್ಲೆಯ, ಬಿಜೆಪಿ ವಿಧಾನ ಪರಿಷತ್ ಸದಸ್ಯ ಮತ್ತವರ ಪತ್ನಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ವಿಷಯವನ್ನು ಅವರೇ ತಮ್ಮ ಫೇಸ್ ಬುಕ್ ಪುಟದಲ್ಲಿ ಹಂಚಿಕೊಂಡಿದ್ದಾರೆ. `ಕುಟುಂಬದ ಕೋವಿಡ್ ಪರೀಕ್ಷಾ ವರದಿಯು ನಿನ್ನೆ ಸಂಜೆ ಬಂದಿದ್ದು, ನನಗೆ ಹಾಗೂ ನನ್ನ ಪತ್ನಿಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ. ಈಗಾಗಲೇ ನಾವು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದೇವೆ. ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ, ಶೀಘ್ರದಲ್ಲೇ ನಾವು ಗುಣಮುಖರಾಗಿ ಬರುತ್ತೇವೆ. ಈ ವಿಷಯ ತಿಳಿದು ಎಲ್ಲರೂ ನನ್ನನ್ನು ಸಂಪರ್ಕ ಮಾಡಲು ಪ್ರಯತ್ನಿಸುತ್ತಿದ್ದು, ಚಿಕಿತ್ಸೆ ಪಡೆಯುತ್ತಿರುವ ಕಾರಣ ನಿಮ್ಮ ಕರೆಗಳಿಗೆ ಸ್ಪಂದಿಸಲಾಗುತ್ತಿಲ್ಲ. ಕ್ಷಮೆ ಇರಲಿ. ನಿಮ್ಮೆಲ್ಲರ ಪ್ರೀತಿ, ವಿಶ್ವಾಸ, ಆಶೀರ್ವಾದದ ಹಾರೈಕೆಗೆ ಆಭಾರಿಯಾಗಿದ್ದೇನೆ. ನಾನು ನನ್ನ ಕುಟುಂಬ ಸದಾ ನಿಮಗೆಲ್ಲ ಚಿರಋಣಿ” ಎಂದು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ. ಕೆಲದಿನಗಳ ಹಿಂದೆ ಎಂಎಲ್ಸಿ ಬೆಂಗಳೂರಿಗೆ ಹೋಗಿ ಬಂದಿದ್ದರು. ಆ ಮೂಲಕ ಅವರಿಗೆ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ.

Leave a Reply

Your email address will not be published. Required fields are marked *