ತಿರುವನಂತಪುರಂ ಮತ್ತೆ ಲಾಕ್ ಡೌನ್!

ತಿರುವನಂತಪುರಂ: ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಯಲು ತಿರುವನಂತಪುರಂನಲ್ಲಿ ಮತ್ತೆ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಪುಲುವಿಲ್ಲಾ ಸೇರಿದಂತೆ ಕರಾವಳಿ ಭಾಗದಲ್ಲಿ ಕೊರೊನಾ ವೈರಸ್ ಸೋಂಕು ಸಮುದಾಯಕ್ಕೆ ಹಬ್ಬಿದೆ ಎಂದು ಕೇರಳ ಸರ್ಕಾರ ಕಳೆದ ಶುಕ್ರವಾರ ಹೇಳಿತ್ತು. ತಿರುವನಂತಪುರಂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಜುಲೈ 28ರ ಮಧ್ಯರಾತ್ರಿ ತನಕ ಲಾಕ್ ಡೌನ್ ಜಾರಿಯಲ್ಲಿರಲಿದೆ. ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಲಾಗಿದ್ದು, ವಾಣಿಜ್ಯ ಚಟುವಟಿಕೆ ಸಂಪೂರ್ಣ ಸ್ಥಗಿತಗೊಂಡಿದೆ.
ತಿರುವನಂತಪುರಂನಲ್ಲಿ 2143 ಪ್ರಕರಗಳಿವೆ. ಭಾನುವಾರ 222 ಹೊಸ ಪ್ರಕರಣಗಳು ದಾಖಲಾಗಿವೆ. ಆದ್ದರಿಂದ, ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದೆ. ಕೇರಳ ಸರ್ಕಾರ ಪುಲುವಿಲ್ಲಾ ಸೇರಿದಂತೆ ತಿರುವನಂತರಪುರಂ ಕರಾವಳಿ ಭಾಗದಲ್ಲಿ ಕೊರೊನಾ ವೈರಸ್ ಸೋಂಕು ಸಮುದಾಯಕ್ಕೆ ಹಬ್ಬಿದೆ ಎಂದು ಹೇಳಿತ್ತು. ಶುಕ್ರವಾರ 791 ಹೊಸ ಪ್ರಕರಣ ದಾಖಲಾಗಿದ್ದವು. ಇವುಗಳಲ್ಲಿ 532 ಪ್ರಕರಣಗಳು ಸ್ಥಳೀಯರಿಂದಲೇ ಹಬ್ಬಿತ್ತು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ಕುರಿತು ಮಾತನಾಡಿದ್ದರು. “ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಲಾಗುತ್ತದೆ” ಎಂದು ಹೇಳಿದ್ದರು.