ದ.ಕ. ಜಿಲ್ಲೆಯಲ್ಲಿಂದು ಕೊರೋನಾರ್ಭಟ! 238 ಪಾಸಿಟಿವ್, 6 ಸಾವು!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಕೊರೋನಾ ಪಾಸಿಟಿವ್ ಪ್ರಕರಣ ದಾಖಲೆಯ ಪ್ರಮಾಣದಲ್ಲಿ ದೃಢಪಟ್ಟಿದೆ. ಬರೋಬ್ಬರಿ 238 ಮಂದಿಗೆ ಕೊರೋನಾ ಪಾಸಿಟಿವ್ ಆಗಿದ್ದರೆ 6 ಮಂದಿ ಸಾವನ್ನಪ್ಪಿದ್ದಾರೆ.
ILI – 106 ಮಂದಿಗೆ ಕೊರೋನಾ ಪಾಸಿಟಿವ್ ಆಗಿದ್ದರೆ, ಸಂಪರ್ಕವೇ ಪತ್ತೆಯಾಗದ 73 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಪ್ರಾಥಮಿಕ ಸಂಪರ್ಕದಿಂದ 23 ಮಂದಿಗೆ ಕೊರೋನಾ ಪಾಸಿಟಿವ್ ಆಗಿದ್ದು ವಿದೇಶದಿಂದ ಬಂದ 19 ಜನರಿಗೆ ಕೊರೋನಾ ಸೋಂಕು ದೃಢಪಟ್ಟರೆ SARI – 17 ಮಂದಿಗೆ ಕೊರೋನಾ ಪಾಸಿಟಿವ್ ಆಗಿದೆ.
ಜಿಲ್ಲೆಯಲ್ಲಿ ಒಂದೇ ದಿನ ಆರು ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ನಾಲ್ಕು ಮಂದಿ ಪುರುಷರು ಹಾಗೂ ಇಬ್ಬರು ಮಹಿಳೆಯರು ಕೊರೋನಾದಿಂದ ಸಾವನ್ನಪ್ಪಿದ್ದಾರೆ. 44, 62, 66 ಹಾಗೂ 68 ವರ್ಷದ ನಾಲ್ವರು ಪುರುಷರು ಬಲಿಯಾದರೆ 47 ಹಾಗೂ 76 ವರ್ಷದ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಇ ಮೂಲಕ ಜಿಲ್ಲೆಯಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 63ಕ್ಕೆ ಏರಿಕೆಯಾಗಿದೆ.