ದ.ಕ. ಜಿಲ್ಲೆಯಲ್ಲಿಂದು 311 ಮಂದಿಗೆ ಕೊರೊನಾ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 311 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಮೂಲಗಳು ಹೇಳಿವೆ. ನಿನ್ನೆ 238 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ನಿನ್ನೆ ಆರು ಮಂದಿ ಸಾವನ್ನಪ್ಪಿದ್ದರು. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚುತ್ತಿದ್ದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.