ದ.ಕ. ಜಿಲ್ಲೆಯಲ್ಲಿ ಇಂದು ನಾಲ್ವರು ಕೊರೋನಾಗೆ ಬಲಿ! ಸಾವಿನ ಸಂಖ್ಯೆ 57ಕ್ಕೇರಿಕೆ!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ನಾಲ್ವರು ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 60 ಹಾಗೂ 68 ವರ್ಷದ ಇಬ್ಬರು ವೃದ್ಧೆಯರು ಮತ್ತು 70 ಹಾಗೂ 73 ವರ್ಷದ ಇಬ್ಬರು ವೃದ್ಧರು ಸಾವನ್ನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 57ಕ್ಕೆ ಏರಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 73 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಸಂಪರ್ಕವೇ ಪತ್ತೆಯಾಗದ 32 ಮಂದಿಗೆ ಕೊರೋನಾ ಪಾಸಿಟಿವ್ ಆಗಿದ್ದು, ಪ್ರಾಥಮಿಕ ಸಂಪರ್ಕದಿಂದ 11 ಮಂದಿಗೆ ಸೋಂಕು ತಗಲಿದೆ.

Leave a Reply

Your email address will not be published. Required fields are marked *