ದ.ಕ. ಜಿಲ್ಲೆಯಲ್ಲಿ 1000 ಬೆಡ್ ಗಳ ತಾತ್ಕಾಲಿಕ ಆಸ್ಪತ್ರೆಯನ್ನು ತಕ್ಷಣ ನಿರ್ಮಿಸಿ -ಮಿಥುನ್ ರೈ ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು 2000ಕ್ಕೂ ಹೆಚ್ಚು ಮಂದಿ ಸೋಂಕಿತರಿದ್ದಾರೆ. ಹೀಗಾಗಿ ಜನರಲ್ಲಿ ಭಯಗ್ರಸ್ಥ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಸೋಂಕಿತರ ಚಿಕಿತ್ಸೆಗೆ ಜಿಲ್ಲೆಯಲ್ಲಿ 1,000 ಬೆಡ್ ಗಳುಳ್ಳ ತಾತ್ಕಾಲಿಕ ಕೋವಿಡ್ ಆಸ್ಪತ್ರೆಯನ್ನು ತಕ್ಷಣವೇ ಆರಂಭಿಸಬೇಕೆಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಜಿಲ್ಲಾಡಳಿತ ಮತ್ತು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಬಡಜನರಿಗೆ ಚಿಕಿತ್ಸೆ ನೀಡುತ್ತಿದ್ದ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಸದ್ಯ ಕೋವಿಡ್ ಆಸ್ಪತ್ರೆಯಾಗಿ ಬದಲಾಗಿದ್ದು ಇದರಿಂದ ಬೇರೆ ಆರೋಗ್ಯ ಕಾರಣಗಳಿಂದ ಜಿಲ್ಲೆಗೆ ಚಿಕಿತ್ಸೆಗಾಗಿ ಬರುವ ಇತರ ಜಿಲ್ಲೆಗಳ ಜನರಿಗೆ ಸಮಸ್ಯೆ ಎದುರಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ ಶೀಘ್ರದಲ್ಲಿ ಕೋವಿಡ್ ಪ್ರಾದೇಶಿಕ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂದು ಮಿಥುನ್ ರೈ ಹೇಳಿದ್ದಾರೆ.