`ದ.ಕ. ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಹಗಲು ದರೋಡೆ’ -ಕಾಂಗ್ರೆಸ್ ಆರೋಪ

ಮಂಗಳೂರು: ಕೊರೋನಾ ಪರೀಕ್ಷೆ ಮಾಡಲು ಸರ್ಕಾರ ನಿಗದಿಪಡಿಸಿರುವ ದರಕ್ಕಿಂತಲೂ ಹೆಚ್ಚಿನ ಶುಲ್ಕವನ್ನು ಪಡೆಯುತ್ತಿದೆ. ಈಗಗಲೇ ಜನರು ಆರ್ಥಿಕವಾಗಿ ತತ್ತರಿಸಿದ್ದು ಇಂಥ ಸಂದರ್ಭದಲ್ಲೂ ಆಸ್ಪತ್ರೆಗಳು ಹಗಲು ದರೋಡೆ ಮಾಡುವುದನ್ನು ನಿಲ್ಲಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮನಪಾ ವಿಪಕ್ಷ ಕಾಂಗ್ರೆಸ್ ನಿಯೋಗ ಜಿಲ್ಲಾಧಿಕಾರಿಗೆ ಮನವಿಯ ಮೂಲಕ ಆಗ್ರಹಿಸಿದೆ.
ಇತ್ತೀಚಿಗೆ ಜಿಲ್ಲೆಯಲ್ಲಿ ದಿನವೊಂದಕ್ಕೆ 150ಕ್ಕಿಂತಲೂ ಹೆಚ್ಚಿನ ಜನ ಸೋಂಕಿತರು ಪತ್ತೆಯಾಗುತ್ತಿದ್ದು, ಇದರ ಮೂಲ ಕಂಡು ಹಿಡಿಯಲು ಸಾಧ್ಯವಾಗುತ್ತಿಲ್ಲ. ಪರೀಕ್ಷಾ ಕೇಂದ್ರದ ಸಿಬ್ಬಂದಿಯೂ ಕೊರೊನಾ ಸೋಂಕಿತರಾಗುತ್ತಿದ್ದು, ಮುಂದಿನ ದಿನಗಳಲ್ಲಿ ಕೊರೊನಾ ಪರೀಕ್ಷಾ ವರದಿ ಸಿಗಲು ಇನ್ನಷ್ಟು ವಿಳಂಬ ಆಗಬಹುದು. ಜನ ಇದರ ಗಂಭೀರತೆಯನ್ನು ಅರಿತುಕೊಳ್ಳದೆ ಸಾರ್ವಜನಿಕವಾಗಿ ಮಾಸ್ಕ್ ಧರಿಸದೇ ತಿರುಗಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಲಾಕ್‍ಡೌನ್ ಮಾಡಿದರೆ ಸೋಂಕು ಹರಡುವುದನ್ನು ಸ್ವಲ್ಪ ಮಟ್ಟಿಗೆ ನಿಯಂತ್ರಿಸಬಹುದು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಮಹಾನಗರ ವಿರೋಧ ಪಕ್ಷದ ನಾಯಕ ಅಬ್ದುಲ್ ರವೂಫ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಭಾಸ್ಕರ್ ಕೆ, ಜೆಸಿಂತಾ ಆಲ್ಫ್ರೆಡ, ಮುಖಂಡ ಸಂತೋಷ್ ಕುಮಾರ್ ಶೆಟ್ಟಿ, ನಗರ ಪಾಲಿಕೆಯ ಸದಸ್ಯರುಗಳಾದ ನವೀನ್ ಡಿಸೋಜಾ, ಕೇಶವ ಮರೋಳಿ, ಪ್ರವೀಣ್ ಚಂದ್ರ ಆಳ್ವಾ, ಎ.ಸಿ.ವಿನಯರಾಜ್, ಸಂಶುದ್ದೀನ್ ಕುದ್ರೋಳಿ, ಅನೀಲ್ ಕುಮಾರ್, ಝೀನತ್ ಸಂಶುದ್ದೀನ್ ಬಂದರ್, ಅಶ್ರಫ್ ಬಜಾಲ್ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *