`ಪಿಎಂ ಕೇರ್ ಫಂಡ್ ಲೆಕ್ಕ ಕೊಡಿ’ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಕಾಂಗ್ರೆಸ್ ನೀಡಿದ್ದ ಒಂದು ಕೋಟಿ ರೂಪಾಯಿ ಪರಿಹಾರದ ಲೆಕ್ಕವನ್ನು ಬಿ.ಎಲ್ ಸಂತೋಷ್ ಕೇಳಿದ್ದಾರೆ, ಅದನ್ನು ಕೊಡುತ್ತೇವೆ. ಆದರೆ ಅದಕ್ಕೂ ಮೊದಲು ಜನರ ಖಾತೆಗೆ ಪ್ರಧಾನಿ ಮೋದಿ ಹಾಕುವುದಾಗಿ ಹೇಳಿರುವ 15 ಲಕ್ಷ ರೂಪಾಯಿಯ ಲೆಕ್ಕ ಕೊಡಿ. ಕೊರೊನಾ ಹೆಸರಲ್ಲಿ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿರುವ
ಪಿಎಂ ಕೇರ್ ಫಂಡ್’ ಲೆಕ್ಕ ಕೊಡಿ ಎಂದು ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
ಚೀನಾ ಸೇನೆ ಎರಡು ಕಿ.ಮೀ. ಹಿಂದೆ ಸರಿದಿದೆ ಎಂದು ಹೇಳಿಕೆ ನೀಡಲು ಬಿ.ಎಲ್ ಸಂತೋಷ್ ರಕ್ಷಣಾ ಸಚಿವರೇ ಅಥವಾ ಸೇನಾ ಮುಖ್ಯಸ್ಥರೇ? ಸಂತೋಷ್ ಅವರೇ, ಮುಖ್ಯಮಂತ್ರಿ ಯಡಿಯೂರಪ್ಪರನ್ನು ಹೊಗಳುವ ಬದಲು ಅವರ ವಿರುದ್ಧ ಸಹೋದ್ಯೋಗಿಗಳನ್ನು ಎತ್ತಿಕಟ್ಟುವುದನ್ನು ನಿಲ್ಲಿಸಿದರೆ ಅವರೇ ನಿಮಗೆ ಶಹಭಾಸ್ಗಿರಿ ಕೊಡಬಹುದು ಎಂದು ವ್ಯಂಗ್ಯವಾಡಿದ್ದಾರೆ.