ಬಂಟ್ವಾಳ:‌ ಕೋವಿಡ್ ನಿಯಮ ಉಲ್ಲಂಘಿಸಿ ಮೆಹಂದಿ ಕಾರ್ಯಕ್ರಮದಲ್ಲಿ ಭರ್ಜರಿ ಪಾರ್ಟಿ, ಡಿಜೆ ಡ್ಯಾನ್ಸ್

ಬಂಟ್ವಾಳ: ಕೋವಿಡ್-19 ಸೋಂಕು ತಡೆಯಲು ಜನರು ಗುಂಪುಗೂಡಬಾರದು, ಮಾಸ್ಕ್ ಧರಿಸಬೇಕು, ಹೆಚ್ಚು ಜನರು ಒಂದೆಡೆ ಸೇರಬಾರದು ಮುಂತಾದ ನಿಯಮಗಳಿದ್ದರೂ, ಅದನ್ನೆಲ್ಲಾ ಗಾಳಿಗೆ ತೂರಿ ಮೆಹಂದಿ ಕಾರ್ಯಕ್ರಮ ನಡೆಸಿ, ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಅಮ್ಮುಂಜೆಯಲ್ಲಿ ನಡೆದಿದೆ.

ಮೆಹಂದಿ ಕಾರ್ಯಕ್ರಮದಲ್ಲಿ ಯುವಕರ ಗುಂಪು ಸಾಮೂಹಿಕವಾಗಿ ಕುಣಿಯುತ್ತಿರುವ ವಿಡಿಯೋ ಈಗ ವೈರಲ್ ಆಗಿದ್ದು, ಇದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ನಿಯಮ ಉಲ್ಲಂಘಿಸಿ ಮೆಹಂದಿ ಕಾರ್ಯಕ್ರಮದಲ್ಲಿ ಇನ್ನೂರಕ್ಕು ಹೆಚ್ಚು ಮಂದಿ ಭಾಗವಹಿಸಿದ್ದರು ಎನ್ನಲಾಗಿದೆ.

ಪ್ರಸ್ತುತ ಜಾರಿಯಲ್ಲಿರುವ ಲಾಕ್ ಡೌನ್ ನಿಯಮದಂತೆ 50 ಜನರು ಸೇರಿ ಮದುವೆ ಸಮಾರಂಭವನ್ನು ನಡೆಸಲು ಸ್ಥಳೀಯ ಪಂಚಾಯತ್ ನಿಂದ ಅನುಮತಿಯನ್ನು ಪಡೆದಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರು ತನಿಖೆಯನ್ನು ನಡೆಸುತ್ತಿದ್ದಾರೆ.

ಯುವಕರ ನೃತ್ಯದ ವಿಡಿಯೋ ಲಾಕ್ ಡೌನ್ ಸಮಯದಲ್ಲಿ ನಡೆದಿರುವುದೇ ಎಂಬುದರ ಬಗ್ಗೆ ಪರಿಶೀಲಿಸಲಾಗುತ್ತಿದ್ದು, ಒಂದು ವೇಳೆ ಲಾಕ್ ಡೌನ್ ಸಮಯದಲ್ಲಿ ನಡೆದಿರುವುದು ದೃಢಪಟ್ಟಲ್ಲಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

Leave a Reply

Your email address will not be published. Required fields are marked *