ಬಂಟ್ವಾಳ: ಫರ್ನಿಚರ್ ಅಂಗಡಿ ಬೆಂಕಿಗಾಹುತಿ

ಮಂಗಳೂರು: ಬಂಟ್ವಾಳದ ಬಸ್ತಿಪಡ್ಪು ಎಂಬಲ್ಲಿನ ಫರ್ನೀಚರ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ತಗಲಿ ಹಾನಿಯುಂಟಾದ ಘಟನೆ ನಡೆದಿದೆ. ಘಟನೆಗೆ ವಿದ್ಯುತ್ ಶಾರ್ಟ್ ಸಕ್ರ್ಯೂಟ್ ಕಾರಣವೆನ್ನಲಾಗಿದೆ. ಸ್ಥಳಕ್ಕೆ ಬಂಟ್ವಾಳ ಅಗ್ನಿಶಾಮಕ ದಳದ ಸಿಬಂದಿ ತೆರಳಿ ಬೆಂಕಿ ನಂದಿಸಿದ್ದಾರೆ. ಲಕ್ಷಾಂತರ ರೂ. ಬೆಲೆಬಾಳುವ ಸೋಫಾ, ಪ್ಲೈವುಡ್ ಮತ್ತಿತರ ಮರದ ಸಾಮಾಗ್ರಿಗಳು ಸುಟ್ಟು ಭಸ್ಮವಾಗಿವೆ. ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *