ಬಜ್ಪೆ: ಪತ್ನಿಯ ಕೊಲೆಗೈದವನಿಗೆ 15 ದಿನಗಳ ನ್ಯಾ. ಸೆರೆ

ಮಂಗಳೂರು: ಬಜ್ಪೆ ಠಾಣಾ ವ್ಯಾಪ್ತಿಯ ಕರಂಬಾರು ಅಂಥೋಣಿಕಟ್ಟೆ ಎಂಬಲ್ಲಿ ಪತ್ನಿಯನ್ನು ಕಲ್ಲಿನ ಕೋರೆಗೆ ದೂಡಿ ಕೊಲೆ ಮಾಡಿದ್ದ ಪ್ರಕರಣದ ಆರೋಪಿ ಗಣೇಶ್ ಕುಮಾರ್(35) ಎಂಬಾತನಿಗೆ ನ್ಯಾಯಾಲಯ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿ ಗಣೇಶ್ ಕೊರೋನ ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದು, ಈ ಹಿನ್ನೆಲೆಯಲ್ಲಿ ಆತನನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಟಿಪ್ಪರ್ ಚಾಲಕ ಗಣೇಶ್ ಕುಮಾರ್ ತನ್ನ ಪತ್ನಿ ಶಾಂತಾ(30) ಎಂಬಾಕೆಯನ್ನು ಜು.1ರಂದು ಸಂಜೆ ಕಾವೂರಿನ ಮನೆಯಿಂದ ಕರೆದುಕೊಂಡು ಹೋಗಿ ಕರಂಬಾರು ಅಂಥೋಣಿಕಟ್ಟೆಯ ಬಳಿ ಕಲ್ಲಿನಕೋರೆಗೆ ದೂಡಿ ಹಾಕಿ ಕೊಲೆ ಮಾಡಿದ್ದ. ಜು.5ರಂದು ಕಾವೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಆತನ ಬಂಧನ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಕಾವೂರು ಠಾಣಾ ಇನ್‍ಸ್ಪೆಕ್ಟರ್ ಸಹಿತ ನಾಲ್ವರು ಪೆÇಲೀಸರನ್ನು ಹೋಂ ಕ್ವಾರಂಟೈನ್‍ಗೆ ಒಳಪಡಿಸಲಾಗಿತ್ತು. ಕೆಲವು ದಿನಗಳ ಬಳಿಕ ಗಣೇಶ್ ಕುಮಾರ್‍ನನ್ನು ಮತೊಮ್ಮೆ ಪರೀಕ್ಷೆಗೆ ಒಳಪಡಿಸಿದಾಗಲೂ ಪಾಸಿಟಿವ್ ಬಂದಿತ್ತು. 3ನೇ ಬಾರಿ ಆತನನ್ನು ಕೊರೊನಾ ಟೆಸ್ಟ್‍ಗೆ ಒಳಪಡಿಸಿದ್ದು ವರದಿ ನೆಗೆಟಿವ್ ಬಂದಿದೆ. ಆರೋಪಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಬೆಂಗಾವಲಾಗಿ ನಿಂತಿದ್ದ ನಾಲ್ವರು ಪೆÇಲೀಸರನ್ನು ಹೋಂ ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ ಎಂದು ಪೆÇಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *