`ಬಿಗ್ ಬಾಸ್’ ಖ್ಯಾತಿಯ ಜಯಶ್ರೀ ರಾಮಯ್ಯ ಆತ್ಮಹತ್ಯೆ ಯತ್ನ

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಬಿಗ್ ಬಾಸ್' ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ತನ್ನ ಸ್ನೇಹಿತರಿಗೆ
ಜೀವನ ಸಾಕು. ಎಲ್ಲರಿಗೂ ಗುಡ್ ಬೈ’ ಎಂದು ಸಂದೇಶ ರವಾನಿಸಿದ್ದ ಆಕೆಯನ್ನು ತಕ್ಷಣವೇ ಮನೆಮಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ಆಕೆ ಮಸೇಜ್ ಮಾಡಿದ್ದು ತಿಳಿದು ಸ್ನೇಹಿತರು ಆಕೆಗಾಗಿ ಹುಡುಕಾಟ ನಡೆಸಿದ್ದು ಮನೆಮಂದಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.