ಬೆಕ್ಕಿನ ಮೇಲೆ ಅಪ್ರಾಪ್ತರಿಂದ ಅನೈಸರ್ಗಿಕ ಲೈಂಗಿಕ ಕ್ರಿಯೆ!

ಇಸ್ಲಾಮಾಬಾದ್: ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬ ತನ್ನ ಗೆಳೆಯರ ಜೊತೆ ಸೇರಿಕೊಂಡು ಬೆಕ್ಕಿನ ಜೊತೆ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿದ ಘಟನೆ ಪಾಕಿಸ್ತಾನದ ಲಾಹೋರ್‌ನಲ್ಲಿ ನಡೆದಿದೆ. ಘಟನೆಯ ಹಿನ್ನೆಲೆಯಲ್ಲಿ ಬೆಕ್ಕು ಸಾವನಪ್ಪಿದೆ. ಈ ಘಟನೆ ವರದಿಯಾಗುತ್ತಲೇ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಬಾಲಕರ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ನೆಟ್ಟಿಗರು ಆಗ್ರಹಿಸಿದ್ದಾರೆ.
ನಿರಂತರವಾಗಿ ಬೆಕ್ಕಿನ ಮೇಲೆ ಲೈಂಗಿಕ ದೌರ್ಜ್ಯನ್ಯ ನಡೆಸಲಾಗಿದೆ. ಪರಿಣಾಮ ಬೆಕ್ಕಿನ ಅಂಗಾಂಗಗಳು ನಿಷ್ಕ್ರಿಯಗೊಂಡು ಸಾವನ್ನಪ್ಪಿದೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಹಾಕಿರುವ ಪೋಸ್ಟ್ ವೈರಲ್ ಆಗಿದ್ದು, ಘಟನೆಯ ಬಗ್ಗೆ ಮಾಹಿತಿ ನೀಡಲಾಗಿದೆ. ಅಪ್ರಾಪ್ತ ಬಾಲಕರ ಕೃತ್ಯಕ್ಕೊಳಗಾಗಿರುವ ಬೆಕ್ಕಿಗೆ ಕುಳಿತುಕೊಳ್ಳಲು ಆಗುತ್ತಿಲ್ಲ. ಬೆಕ್ಕನ್ನು ವೈದ್ಯರ ಬಳಿ ಕರೆದುಕೊಂಡು ಹೋದಾಗ ಅದರೊಳಗಿಂದ ಸ್ಪರ್ಮ್, ರಕ್ತ ಮತ್ತು ಪ್ಲಾಸ್ಟಿಕ್ ಬ್ಯಾಗ್ ಹೊರ ತೆಗೆಯಲಾಗಿದೆ. ಈ ಪ್ಲಾಸ್ಟಿಕ್ ಬ್ಯಾಗ್ ಬಳಸಿ ಹುಡುಗರು ದೌರ್ಜನ್ಯ ನಡೆಸಿದ್ದರು. ಬೆಕ್ಕಿನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದನ್ನು ವೈದ್ಯರು ದೃಢಪಡಿಸಿದ್ದು, ಆದರೆ ಈ ಬಗ್ಗೆ ವೈದ್ಯಕೀಯ ವರದಿ ನೀಡಲು ಡಾಕ್ಟರ್ ಹಿಂದೇಟು ಹಾಕಿದ್ದಾರೆ ಎಂದು ವರದಿ ಬಿತ್ತರವಾಗಿದೆ. ಪರಿಣಾಮ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಪಾಕಿಸ್ತಾನದ ಮಕ್ಕಳಿಗೆ ಲೈಂಗಿಕ ಶಿಕ್ಷಣದ ಕೊರತೆಯಿದೆ. ಹಾಗಾಗಿ ಇಂತಹ ಕೃತ್ಯಗಳು ಬೆಳಕಿಗೆ ಬರುತ್ತಿರುತ್ತವೆ. ಇದರ ಜೊತೆಗೆ ಶಾಲೆಗಳಲ್ಲಿ ಲೈಂಗಿಕ ಶಿಕ್ಷಣ ನೀಡುವ ಕಾರ್ಯಕ್ರಮಗಳನ್ನು ಜಾರಿಗೆ ತರಬೇಕು. ಬಾಲಕರ ಕೃತ್ಯಕ್ಕೆ ಬಲಿಯಾದ ಬೆಕ್ಕಿಗೆ ನ್ಯಾಯ ಸಿಗಬೇಕೆಂದು ನೆಟ್ಟಿಗರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *