ಭದ್ರತಾ ಪಡೆಗಳ ಗುಂಡಿನ ದಾಳಿ: ಮೂವರು ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ನಾಗ್ನಾಡ್-ಚಿಮ್ಮರ್ ಪ್ರದೇಶದಲ್ಲಿ ಇಂದು ಮುಂಜಾನೆ ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‍ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಆದರೆ ಘಟನೆಯಲ್ಲಿ ಮೂವರು ಯೋಧರಿಗೂ ಗಾಯವಾಗಿದೆ ಎನ್ನಲಾಗಿದೆ.
ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಜಂಟಿ ಕಾರ್ಯಾಚರಣೆ ನಡೆಸಿದ ಜಮ್ಮು ಕಾಶ್ಮೀರ ಪೆÇಲೀಸರು, ಭಾರತೀಯ ಸೇನಾಪಡೆ ಹಾಗೂ ಸಿಆರ್‍ಪಿಎಫ್ ಪಡೆಗಳು ಮೂವರು ಉಗ್ರರನ್ನು ಸದೆಬಡಿದಿದೆ. ಈ ಕಾರ್ಯಾಚರಣೆಯ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ ಮೂವರು ಭಾರತೀಯ ಯೋಧರು ಕೂಡ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಹತರಾಗಿರುವ ಉಗ್ರರ ಗುರುತು ಇನ್ನೂ ಪತ್ತೆಯಾಗಿಲ್ಲ ಎನ್ನಲಾಗಿದೆ. ಇನ್ನೂ ಹಲವಾರು ಉಗ್ರರು ಇಲ್ಲಿ ಅಡಗಿರುವ ಮಾಹಿತಿ ಇದ್ದು, ಕಾರ್ಯಾಚರಣೆ ಮುಂದುವರೆದಿದೆ.

Leave a Reply

Your email address will not be published. Required fields are marked *