ಮಂಗಳವಾರ ರಾತ್ರಿಯಿಂದ ದ.ಕ. ಜಿಲ್ಲೆ ಲಾಕ್ ಡೌನ್!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿ ವ್ಯಾಪಕವಾಗಿ ಒಬ್ಬರಿಂದ ಒಬ್ಬರಿಗೆ ಹರಡುತ್ತಿದ್ದು ನಿಯಂತ್ರಣಕ್ಕೆ ಸಿಗದ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ಮಂಗಳವಾರ ರಾತ್ರಿಯಿಂದ 1 ವಾರದ ಮಟ್ಟಿಗೆ ಲಾಕ್ ಡೌನ್ ಮಾಡಲಾಗುತ್ತದೆ ಹೀಗೆಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.
ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ ಎಂದು ಮೂಲಗಳು ಹೇಳಿವೆ.

Leave a Reply

Your email address will not be published. Required fields are marked *