ಮಂಗಳೂರಿಗೆ ಡಿಕೆಶಿ ಭೇಟಿ, ಆಸ್ಕರ್ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಅಧ್ಯಕ್ಷ!

ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ಮುಂಜಾನೆ ನಗರಕ್ಕೆ ಭೇಟಿ ನೀಡಿದ್ದು ಈ ವೇಳೆ ಮಂಗಳೂರಿನ ಕಾಂಗ್ರೆಸ್ ನಾಯಕರು ಅದ್ಧೂರಿಯಾಗಿ ಸ್ವಾಗತಿಸಿದರು.
ಈ ವೇಳೆ ಮಾತಾಡಿದ ಡಿಕೆಶಿ, “ಆಸ್ಕರ್ ಫರ್ನಾಂಡೀಸ್, ಜನಾರ್ಧನ ಪೂಜಾರಿ ನನ್ನ ರಾಜಕೀಯ ಗುರುಗಳು. ಅವರನ್ನು ಭೇಟಿಮಾಡಿ ಆಶೀರ್ವಾದ ಪಡೆಯಲಿದ್ದೇನೆ ಎಂದರು.
ನಂತರ ಡಿ.ಕೆ. ಶಿವಕುಮಾರ್ ಅವರು ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡೀಸ್ ಅವರ ಮಂಗಳೂರು ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಆಸ್ಕರ್ ಅವರ ಪತ್ನಿ ಬ್ಲಾಸಂ ಫರ್ನಾಂಡೀಸ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಈ ಸಂದರ್ಭದಲ್ಲಿ ಇದ್ದರು.