ಮಂಗಳೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 19ಕ್ಕೆ ಏರಿಕೆ

ಮಂಗಳೂರು: ಕೊರೊನಾದಿಂದ ದ.ಕ. ಜಿಲ್ಲೆಯಲ್ಲಿ ಸಾವಿನ ಸರಣಿ ಮುಂದುವರಿದಿದ್ದು, ಇಂದು ಸಂಜೆ ಮತ್ತೊಬ್ಬರು ವ್ಯಕ್ತಿ ಬಲಿಯಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿದೆ.
ದ.ಕ. ಜಿಲ್ಲೆಯ ಕೋವಿಡ್ ಆಸ್ಪತ್ರೆ ವೆನ್ಲಾಕ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಗಿ ತಿಳಿದುಬಂದಿದೆ.