ಮುಂಡ್ಕೂರು: ಅಗ್ನಿ ಅನಾಹುತ, ಲಕ್ಷಾಂತರ ರೂ. ನಷ್ಟ

ಮಂಗಳೂರು: ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮುಂಡ್ಕೂರಿನಲ್ಲಿರುವ ಆಭರಣಗಳ ಬಾಕ್ಸ್ ತಯಾರಿಕಾ ಫ್ಯಾಕ್ಟರಿಯಲ್ಲಿ ಬೆಂಕಿ ಅನಾಹುತ ಸಂಭವಿಸಿ ಲಕ್ಷಾಂತರ ಮೌಲ್ಯದ ಸೊತ್ತು ಸುಟ್ಟು ಕರಕಲಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮುಂಡ್ಕೂರು ಗ್ರಾಮದ ಸುಧೀರ್ ಶೆಣೈ ಎಂಬವರಿಗೆ ಸೇರಿದ ಘಟಕದಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *