ಮೆಹಂದಿ‌ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ ಡಿಜೆ‌ ಡ್ಯಾನ್ಸ್: ಹಲವರ ವಿರುದ್ಧ ಕೇಸ್

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದುವೆ ಸಮಾರಂಭದ ನಿಮಿತ್ತ ನಡೆದ ಕಾರ್ಯಕ್ರಮವೊಂದರಲ್ಲಿ ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿ ಗುಂಪು ಸೇರಿಸಿ ಧ್ವನಿ ವರ್ಧಕಗಳನ್ನು ಬಳಸಿ ನೃತ್ಯ ಮಾಡುತ್ತಿರುವುದು ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರು ತನಿಖೆ ನಡೆಸಿದ್ದಾರೆ.

ಮೆಹಂದಿ ಕಾರ್ಯಕ್ರಮವು ದಿನಾಂಕ 01.07.2020ರಂದು ಬಂಟ್ವಾಳ ಅಮ್ಮುಂಜೆ ಗ್ರಾಮದ ಶಿವಪ್ಪ ಪೂಜಾರಿ ಎಂಬವರ ಮನೆಯಲ್ಲಿ ಮಗ ತಿಲಕ್ ರಾಜ್ ಎಂಬಾತನ ಮದುವೆ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮವಾಗಿದೆ. ಇಲ್ಲಿ ಲಾಕ್ಡೌನ್ ನಿಯಮಗಳ ಉಲ್ಲಂಘನೆಯಾಗಿರುವುದು ದೃಢಪಟ್ಟಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ದಿನಾಂಕ 05.07.2020ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆರೋಪಿಗಳಾದ ಶಿವಪ್ಪ ಪೂಜಾರಿ ಮತ್ತು ಅವರ ಮಗ ತಿಲಕ್ ರಾಜ್ ಮತ್ತು ಇತರರ ವಿರುದ್ಧ ಪ್ರಕರಣ ಕಲಂ 269, 270 ಐಪಿಸಿ ಮತ್ತು ಕಲಂ 5(1) ಕರ್ನಾಟಕ ಎಪಿಡೆಮಿಕ್ ಡಿಸೀಸ್ ಆರ್ಡಿನೆನ್ಸ್ ಕಾಯ್ದೆ 2020 ಯಂತೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *