ಮೊಬೈಲ್ಗಾಗಿ ಹಸು ಮಾರಿದ ಕುಟುಂಬಕ್ಕೆ ನಟ ಸೋನು ನೆರವು

ಶಿಮ್ಲಾ: ಮಕ್ಕಳ ಆನ್ಲೈನ್ ಶಿಕ್ಷಣಕ್ಕಾಗಿ ಸಾಕಿದ್ದ ಹಸುವನ್ನೇ ಮಾರಿ ಮೊಬೈಲ್ ಕೊಡಿಸಿದ ಕುಟುಂಬದ ನೆರವಿಗೆ ಸದ್ಯ ಬಾಲಿವುಡ್ ನಟ ಸೋನು ಸೂದ್ ಮುಂದಾಗಿದ್ದಾರೆ. ಸದ್ಯ ದೇಶದ ಹೆಚ್ಚಿನ ಕಡೆ ಆನ್ಲೈನ್ನಲ್ಲೇ ಶಿಕ್ಷಣ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಬಡ ಕುಟುಂಬ ಅನಿವಾರ್ಯವಾಗಿ ತಾವು ಸಾಕಿದ್ದ ಹಸು ಮಾರಾಟ ಮಾಡಿ, ಮೊಬೈಲ್ ಖರೀದಿಸಿದ್ದರು.
ಹಿಮಾಚಲ ಪ್ರದೇಶದಲ್ಲಿ ಕಡು ಬಡ ಕುಟುಂಬದ ಕುಲ್ದೀಪ್ ಕುಮಾರ್ ತನ್ನ ಮಕ್ಕಳು ಇತರರಂತೆ ಓದಬೇಕು ಎಂದು ತಾನು ಸಾಕಿದ್ದ ಹಸುವನ್ನೇ ಮಾರಿ 6 ಸಾವಿರ ರೂ. ಕೊಟ್ಟು ಮೊಬೈಲ್ ಖರೀದಿಸಿದ್ದರು. ಹೆಚ್ಚಿನ ಮಾಧ್ಯಮಗಳು ಈ ಬಗ್ಗೆ ಸುದ್ದಿ ಪ್ರಕಟಿಸಿದ್ದವು. ಇದೀಗ ಈ ಕುಟುಂಬದ ನೆರವಿಗೆ ಸೋನು ಮುಂದಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸೋನು ಸೂದ್, ಆನ್ಲೈನ್ ಶಿಕ್ಷಣಕ್ಕಾಗಿ ಮಾರಿದ ಹಸುವನ್ನು ಮಕ್ಕಳ ತಂದೆಗೆ ವಾಪಸ್ ಕೊಡಿಸುತ್ತೇನೆ. ಸದ್ಯ ನಂಗೆ ಅವರ ಬಗ್ಗೆ ಹೆಚ್ಚಿನ ಮಾಹಿತಿ ಯಾರಾದರೂ ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ನಟ ಈ ರೀತಿ ಮನವಿ ಮಾಡಿಕೊಳ್ಳುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಮೊದಲು ಅಂದರೆ ಲಾಕ್ಡೌನ್ ಸಮಯದಲ್ಲಿ ಹಲವಾರು ಪ್ರವಾಸಿ ಕಾರ್ಮಿಕರನ್ನು ಅವರವರ ಊರಿಗೆ ತಲುಪಿಸುವ ಕಾರ್ಯ ಮಾಡಿದ್ದರು. ಅಲ್ಲದೆ 400ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಿದ್ದರು. ಇತ್ತೀಚೆಗೆ ಮಹಾರಾಷ್ಟ್ರ ಪೆÇಲೀಸರಿಗೆ 25 ಸಾವಿರ ಫೇಸ್ ಶೀಲ್ಡ್ ನೀಡುವ ಮೂಲಕ ಅನೇಕ ಮಾನವೀಯ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ಇದೀಗ ಹಸು ವಾಪಸ್ ಮಾಡುತ್ತೇನೆ ಎಂದು ಬಡ ಕುಟುಂಬದ ಬೆನ್ನಿಗೆ ನಿಂತಿರುವ ನಟನ ಪೆÇೀಸ್ಟ್ ಗೆ ಹಲವಾರು ಕಮೆಂಟ್ ಗಳು ಬಂದಿವೆ. ಒಬ್ಬ ನಟ ಏಕಾಂಗಿಯಾಗಿ ನಮ್ಮ ದೇಶದ ಬಡ ಕುಟುಂಬಗಳಿಗೆ ಸಹಾಯ ಮಾಡುತ್ತಿದ್ದಾರೆ. ಅಂತೆಯೇ ದೇಶದಲ್ಲಿರುವ ಎಲ್ಲಾ ರಾಜಕೀಯ ವ್ಯಕ್ತಿಗಳಿಂದ ಎಷ್ಟು ಇಂತಹ ಮಾನವೀಯ ಕೆಲಸಗಳು ಆಗಬಹುದು ಎಂದು ನೀವೇ ಊಹಿಸಿಕೊಳ್ಳಿ. ಸೋನು ಸೂದ್ ಅವರು ಮಾಡುತ್ತಿರುವ ಕೆಲಸಕ್ಕೆ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸಲು ಇಷ್ಟಪಡುತ್ತೇನೆ. ದೇವರು ನಿಮಗೆ ಹೆಚ್ಚಿನ ಆರೋಗ್ಯ ಹಾಗೂ ಸಂಪತ್ತನ್ನು ಕರುಣಿಸಲಿ. ನಿಮ್ಮಿಂದ ಇನ್ನಷ್ಟು ಒಳ್ಳೆಯ ಕಾರ್ಯಗಳು ಆಗಲಿ. ಜೈ ಹಿಂದ್ ಸರ್ ಎಂದು ಒಬ್ಬರು ಬರೆದುಕೊಂಡಿದ್ದಾರೆ. ಹೀಗೆ ಹೆಚ್ಚಿನ ಸಂಖ್ಯೆಯಲ್ಲಿ ಸೋಶಲ್ ಮೀಡಿಯಾದಲ್ಲಿ ಸೋನು ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.