ರಾಕ್ ಲೈನ್ ಪತ್ನಿಗೂ ಕೊರೊನಾ ಸೋಂಕು!

ಬೆಂಗಳೂರು: ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಪತ್ನಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಅವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆಯಷ್ಟೇ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಕೊರೊನಾ ವೈರಸ್ ಇರುವುದು ಪತ್ತೆಯಾಗಿತ್ತು. ಕೆಲವು ದಿನಗಳ ಹಿಂದೆ ಸುಮಲತಾ ಅವರು ರಾಕ್ ಲೈನ್ ವೆಂಕಟೇಶ್ ಮತ್ತಿತರರ ಜತೆ ಸಭೆ ನಡೆಸಿದ್ದರು. ಇದರಿಂದ ರಾಕ್ ಲೈನ್ ಅವರಿಗೂ ಸೋಂಕು ತಗುಲಿದೆ ಎಂಬ ಸುದ್ದಿ ಹಬ್ಬಿತ್ತು.
ರಾಕ್ ಲೈನ್ ವೆಂಕಟೇಶ್ ಅವರಿಗೆ ಸೋಂಕು ಇದೆ ಎನ್ನುವುದನ್ನು ಅವರ ಮಗ ಯತೀಶ್ ನಿರಾಕರಿಸಿದ್ದಾರೆ. ತಾಯಿಗೆ ಸೋಂಕು ಇರುವುದು ದೃಢಪಟ್ಟಿದೆ. ತಂದೆ ಹೋಮ್ ಕ್ವಾರೆಂಟೈನ್‍ನಲ್ಲಿ ಇದ್ದಾರೆ ಎಂದು ಅವರು ತಿಳಿಸಿದ್ದಾರೆ. ಸುಮಲತಾ ಅವರಿಗೆ ಸೋಂಕು ದೃಢಪಟ್ಟ ಬಳಿಕ ರಾಕ್ ಲೈನ್ ವೆಂಕಟೇಶ್ ಅವರು ಆಸ್ಪತ್ರೆಗೆ ದಾಖಲಾಗಿ ತಪಾಸಣೆಗೆ ಒಳಪಟ್ಟಿದ್ದರು.

Leave a Reply

Your email address will not be published. Required fields are marked *