ಲಾಕ್ ಡೌನ್ ಬಗ್ಗೆ ನಾಳೆ ನಿರ್ಧಾರ-ಕೋಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೆ ತರುವ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ನಾಳೆ ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ತಾನು, ಲೋಕಸಭಾ ಸದಸ್ಯರು ಹಾಗೂ ಜಿಲ್ಲಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಿದದ್ದು, ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.