ವಾಮದಪದವು: ಆಶಾ ಕಾರ್ಯಕರ್ತೆಗೆ ಹಲ್ಲೆ!

ಮಂಗಳೂರು: ಬಂಟ್ವಾಳ ತಾಲೂಕಿನ ವಾಮದಪದವು ಸಮೀಪದ ಕೊಡಂಬೆಟ್ಟು ಎಂಬಲ್ಲಿ ಕರ್ತವ್ಯನಿರತ ಆಶಾ ಕಾರ್ಯಕರ್ತೆ ಮಮತಾ ಗಟ್ಟಿ ಎಂಬವರಿಗೆ ಸ್ಥಳೀಯ ವ್ಯಕ್ತಿಯೋರ್ವ ಹಲ್ಲೆಗೈದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಆರೋಪಿಯನ್ನು ಮಜಲು ನಿವಾಸಿ ಕಾಂತಪ್ಪ ಪೂಜಾರಿ ಎಂದು ಹೆಸರಿಸಲಾಗಿದೆ. ಮಮತಾರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಪರಾರಿಯಾಗಿದ್ದು ಆತನ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *