ವೆನ್ಲಾಕ್ ನಿಂದ ಪರಾರಿಯಾಗಿದ್ದ ಕೊರೊನಾ ಸೋಂಕಿತ ಸೆರೆ!

ಮಂಗಳೂರು: ನಿನ್ನೆ ವೆನ್ಲಾಕ್ ಕೋವಿಡ್ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ಕೊರೊನಾ ಸೋಂಕಿತ ಪುತ್ತೂರು ದರ್ಬೆ ನಿವಾಸಿ ದೇವರಾಜ್ ಎಂಬವನನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪೊಲೀಸ್ ಕಮಿಷನರ್ ವಿಕಾಶ್ ಕುಮಾರ್ ಅವರು, ಕಾನ್ ಸ್ಟೇಬಲ್ ಗಳಾದ ಶಂಕರಪ್ಪ ಲಮಾಣಿ ಹಾಗೂ ಶಂಕರಪ್ಪ ನಂದಿಯಾಳ್ ಅವರು ಪರಾರಿಯಾಗಿದ್ದ ಕೊರೊನಾ ಸೋಂಕಿತನನ್ನು ಪತ್ತೆಹಚ್ಚುವ ಮೂಲಕ ಒಳ್ಳೆಯ ಕೆಲಸ ಮಾಡಿದ್ದಾರೆ. ಈ ಮೂಲಕ ಕೊರೊನಾ ಸೋಂಕಿತ ಮತ್ತಷ್ಟು ಜನರಿಗೆ ಸೋಂಕು ಹರಡುವುದನ್ನು ತಪ್ಪಿಸಿದಂತಾಗಿದೆ ಎಂದು ಶ್ಲಾಘಿಸಿದ್ದಾರೆ.

Leave a Reply

Your email address will not be published. Required fields are marked *