ಸಮುದಾಯಕ್ಕೆ ಹರಡಿದ ಕೊರೋನಾ: ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಆತಂಕ!

ನವದೆಹಲಿ: ಭಾರತದಲ್ಲಿ ಕೊರೊನಾವೈರಸ್ ಮಹಾಮಾರಿಯು ಸಮುದಾಯದ ಹಂತದಲ್ಲಿ ಹರಡುವುದಕ್ಕೆ ಶುರುವಾಗಿದೆ ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಆತಂಕ ವ್ಯಕ್ತಪಡಿಸಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಅಪಾಯ ಎದುರಾಗುವ ಸಾಧ್ಯತೆಗಳಿವೆ ಎಂದು ಎಚ್ಚರಿಕೆ ನೀಡಿದೆ.
ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಹಾಸ್ಪಿಟಲ್ ಬೋರ್ಡ್ ಚೇರ್ ಮೆನ್ ಡಾ.ವಿ.ಕೆ.ಮೊಂಗಾ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಪ್ರತಿನಿತ್ಯ ದೇಶದಲ್ಲಿ 30,000ಕ್ಕೂ ಅಧಿಕ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗುತ್ತಿವೆ. ಸಮುದಾಯದ ಹಂತದಲ್ಲಿ ಕೊರೊನಾವೈರಸ್ ಹರಡುತ್ತಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಡಾ.ವಿಕೆ.ಮೊಂಗಾ ತಿಳಿಸಿದ್ದಾರೆ.

Leave a Reply

Your email address will not be published. Required fields are marked *