ಸಿಎಂ ಬಿಎಸ್ವೈ ಕಾರ್ ಚಾಲಕನಿಗೂ ಕೊರೊನಾ!

ಬೆಂಗಳೂರು: ಸಿಎಂ ಯಡಿಯೂರಪ್ಪ ನಿವಾಸದಲ್ಲಿ ಕೆಲಸ ಮಾಡುವ 10 ಮಂದಿಗೆ ಕೊರೊನಾ ಸೋಂಕು ತಗಲಿದ್ದು ಇಂದು ಬಿಎಸ್ವೈ ಜೊತೆಗಿರುವ ಕಾರ್ ಚಾಲಕನಿಗೂ ಕೊರೊನಾ ಸೋಂಕು ತಗುಲಿದೆ. ಸಿಎಂ ಇಂದಿನ ತಮ್ಮೆಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದು ಸೆಲ್ಫ್ ಕ್ವಾರಂಟೈನ್ ಆಗಿದ್ದಾರೆ.
ಗೃಹ ಕಚೇರಿಯಲ್ಲಿ ಕೊರೊನಾ ಸೋಂಕು ಹರಡಿರುವ ಕಾರಣ ಇಂದಿನಿಂದ ಕೆಲದಿನಗಳ ಕಾಲ ಮನೆಯಲ್ಲೇ ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆಯಲ್ಲಿ ಭಾಗಿಯಾಗುವುದಾಗಿ ಮುಖ್ಯಮಂತ್ರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಾನು ಆರೋಗ್ಯವಾಗಿದ್ದೇನೆ ಯಾವ ಸಮಸ್ಯೆಯೂ ಇಲ್ಲ, ಯಾರೂ ಆತಂಕಪಡುವ ಅಗತ್ಯವಿಲ್ಲ. ಎಲ್ಲರೂ ಸರ್ಕಾರದ ನಿಯಮಗಳನ್ನು ಪಾಲಿಸಿ ಕೋವಿಡ್ ವಿರುದ್ದ ಹೋರಾಟಕ್ಕೆ ಸಹಕರಿಸಿ ಎಂದು ಮನವಿ ಮಾಡಿದ್ದಾರೆ.