ಸಿಬ್ಬಂದಿಗೆ ಕೊರೋನಾ! ಸಚ್ಚೇರಿಪೇಟೆ ಆರೋಗ್ಯ ಕೇಂದ್ರ ಸೀಲ್ ಡೌನ್

ಮೂಡಬಿದ್ರೆ: ಕಾರ್ಕಳ ತಾಲೂಕಿನ ಸಚ್ಚೇರಿಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಡಿ ದರ್ಜೆಯ ಮಹಿಳಾ ನೌಕರರೋರ್ವರಿಗೆ ಕೋವಿಡ್-19 ಸೋಂಕು ದೃಢವಾಗಿದೆ ಎಂದು‌ ಹೇಳಲಾಗುತ್ತಿದ್ದು, ಆಸ್ಪತ್ರೆ ಮತ್ತು ಆಕೆಯ ನಿವಾಸದ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ.

ಈ ಸಿಬ್ಬಂದಿ ವೈದ್ಯೇತರ ವರ್ಗಕ್ಕೆ ಸೇರಿದವರು ಎನ್ನಲಾಗಿದೆ. ಇತ್ತೀಚೆಗೆ ಇವರಲ್ಲಿ ಕೋವಿಡ್-19 ಸೋಂಕಿನ ಕೆಲ ಲಕ್ಷಣಗಳು ಪತ್ತೆಯಾದ ಕಾರಣ ಸಚ್ಚೇರಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸೀಲ್ ಡೌನ್ ಮಾಡಲಾಗಿದೆ. ಸದ್ಯ ಆರೋಗ್ಯ ಕೇಂದ್ರದ ವೈದ್ಯರನ್ನು, ಸಿಬ್ಬಂದಿಗಳನ್ನು ಹೋಂ ಕ್ವಾರಂಟೈನ್ ಆಗುವಂತೆ ಸೂಚಿಸಲಾಗಿದೆ.
ಆರೋಗ್ಯ ಕೇಂದ್ರವನ್ನು ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲು ನಿರ್ಧರಿಸಿಲಾಗಿದೆ. ಕೇಂದ್ರವನ್ನು ಸ್ಯಾನಿಟೈಸ್ ಮಾಡಿ ನಂತರ ತೆರೆಯಲಾಗುವುದು ಎಂದು ಸುದ್ದಿಯಾಗಿದ್ದು, ಕೆಲ ಮೂಲಗಳ ಪ್ರಕಾರ ಈಕೆಯ ವರದಿ ಇನ್ನೂ ಖಚಿತಗೊಂಡಿಲ್ಲ. ಮತ್ತು ಮುಂಜಾಗ್ರತಾ ಕ್ರಮವಾಗಿ ಕ್ರಮ‌ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ

Leave a Reply

Your email address will not be published. Required fields are marked *