ಸುಳ್ಯ: ಯುವಕ ನೀರುಪಾಲು

ಮಂಗಳೂರು: ಹೊಳೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕ ನೀರಲ್ಲಿ ಮುಳುಗಿ ಸಾವಿಗೀಡಾದ ಘಟನೆ ಇಂದು ಸಂಜೆ ನಡೆದಿದೆ. ಮೃತ ಯುವಕನನ್ನು ಎಡಮಂಗಲದ ಪ್ರಕಾಶ್(25) ಎಂದು ಹೆಸರಿಸಲಾಗಿದೆ. ಕುಮಾರಧಾರ ನದಿಗೆ ಮೀನು ಹಿಡಿಯಲು ತೆರಳಿದ್ದ ಯುವಕ ನೀರು ಪಾಲಾಗಿರುವ ಮಾಹಿತಿ ಲಭಿಸಿದೆ. ಬೆಳ್ಳಾರೆ ಠಾಣಾ ಪೊಲೀಸರು, ಅಗ್ನಿ ಶಾಮಕದಳ ಸ್ಥಳಕ್ಕೆ ಬೇಟಿ ನೀಡಿ ಶೋಧ ಕಾರ್ಯ ಆರಂಭಿಸಿದ್ದು ಯುವಕನ ಮೃತದೇಹ ಪತ್ತೆಯಾಗಿದೆ.