ಸುಶಾಂತ್ ಆತ್ಮಹತ್ಯೆ: ವಿಚಾರಣೆಗೆ ಹಾಜರಾದ ಬನ್ಸಾಲಿ

ಮುಂಬೈ: ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಬಾಲಿವುಡ್ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಬಾಲಿವುಡ್ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ಪಾತ್ರವಿದೆ ಎಂಬ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಬನ್ಸಾಲಿ ಇಂದು ಮುಂಬೈ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಮಧ್ಯಾಹ್ನ 12.30ರ ಸಮಯಕ್ಕೆ ಬನ್ಸಾಲಿ ತಮ್ಮ ವಕೀಲ ಹಾಗೂ ಇಬ್ಬರು ಸಿಬ್ಬಂದಿ ಜೊತೆಯಲ್ಲಿ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ.
ಬನ್ಸಾಲಿ ಸುಶಾಂತ್ ಜೊತೆ ಸಿನಿಮಾಗೆ ಸಂಬಂಧಪಟ್ಟಂತೆ ಒಪ್ಪಂದ ಮಾಡಿಕೊಂಡಿದ್ದರು. ಆತ್ಮಹತ್ಯೆ ಕೇಸ್‍ನಲ್ಲಿ 30 ಜನರನ್ನು ವಿಚಾರಣೆ ಮಾಡಲಾಗಿದೆ. ಸುಶಾಂತ್ ಕುಟುಂಬಸ್ಥರು, ಗೆಳತಿ ರಿಯಾ ಚಕ್ರವರ್ತಿ, ಕಾಸ್ಟಿಂಗ್ ನಿರ್ದೇಶಕ ಮುಖೇಶ್, ಯಶ್ ರಾಜ್ ಬ್ಯಾನರ್ ನ ಕಾಸ್ಟಿಂಗ್ ನಿರ್ದೇಶಕ ಸೇರಿಸಂತೆ ಹಲವರ ಹೇಳಿಕೆ ಪಡೆಯಲಾಗಿದೆ. ಕಳೆದ ಜೂನ್ 14 ರಂದು ಬಾಂದ್ರಾದ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸುಶಾಂತ್ ಪತ್ತೆಯಾಗಿದ್ದರು. ಪ್ರಾಥಮಿಕ ವರದಿ ಹಾಗೂ ಮರಣೋತ್ತರ ಪರೀಕ್ಷೆಯಲ್ಲಿ ಆತ್ಮಹತ್ಯೆ ಎಂದು ತಿಳಿದು ಬಂದಿದೆ. ಪಾಟ್ನಾದ ನ್ಯಾಯಾಲಯದಲ್ಲಿ ಸಲ್ಮಾನ್ ಖಾನ್, ಸಂಜಯ್ ಲೀಲಾ ಬನ್ಸಾಲಿ, ಕರಣ್ ಜೋಹರ್ ಸೇರಿದಂತೆ ಹಲವು ಜನರ ಮೇಲೆ ಕೇಸ್ ದಾಖಲಾಗಿದೆ.

Leave a Reply

Your email address will not be published. Required fields are marked *