`ಸುಶಾಂತ್ ಸಿಂಗ್ ಪ್ರಕರಣ ಸಿಬಿಐಗೆ ವಹಿಸಲ್ಲ’ ಮಹಾರಾಷ್ಟ್ರ ಸರಕಾರ

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಲವಾದ ಒತ್ತಡ ಕೇಳಿ ಬಂದಿದ್ದರೂ ಮಹಾರಾಷ್ಟ್ರ ಸರ್ಕಾರ ಮಾತ್ರ ಪ್ರಕರಣವನ್ನು ಸಿಬಿಐಗೆ ವಹಿಸಲ್ಲ, ಮಹಾರಾಷ್ಟ್ರ ಪೆÇಲೀಸರೇ ತನಿಖೆ ನಡೆಸಲಿದ್ದಾರೆ. ಬಾಂದ್ರಾ ಪೆÇಲೀಸರು ಇದೊಂದು ಅಸಹಜ ಸಾವು, ಆತ್ಮಹತ್ಯೆ ಪ್ರಕರಣ ಎಂದು ಹೇಳಿದ್ದಾರೆ. ಆದರೆ ಬಿಹಾರದಲ್ಲಿ ಮಾತ್ರ ಇದು ಆತ್ಮಹತ್ಯೆಯಲ್ಲ ಕೊಲೆ, ಇದರ ಹಿಂದೆ ಭಾರಿ ಷಡ್ಯಂತ್ರವಿದೆ ಎಂದು ಆರೋಪಿಸಿದ್ದಾರೆ. ಸಾಮಾಜಿಕ ಜಾಲ ತಾಣ, ಸೆಲೆಬ್ರಿಟಿಗಳು, ರಾಜಕಾರಣಿಗಳು ಸಿಬಿಐ ತನಿಖೆಗೆ ಆಗ್ರಹಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದು ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿದ್ದರು. ಅಮಿತ್ ಶಾ ಅವರು ಈ ಕುರಿತಂತೆ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂಬ ವರದಿ ಬಂದಿದೆ. ಆದರೆ, ಈ ನಡುವೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಮಾತ್ರ ಸಿಬಿಐಗೆ ವಹಿಸಲು ಮನಸ್ಸು ಮಾಡಿಲ್ಲ. ಪ್ರಕರಣಕ್ಕೆ ಸಂಬಂಧಿಸಿ ಸುಶಾಂತ್ ಸ್ನೇಹಿತರು, ಕುಟುಂಬ ಸದಸ್ಯರು, ಸಿನಿಮಾ ಕ್ಷೇತ್ರದ ಹಲವಾರು ಮಂದಿ ಹೇಳಿಕೆ ಪಡೆದುಕೊಳ್ಳಲಾಗಿದೆ. ಹಿಂದೂಜಾ ಆಸ್ಪತ್ರೆಯ ಹಿರಿಯ ಸೈಕಿಯಾಟ್ರಿಸ್ಟ್ ಅವರ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ. ಸುಶಾಂತ್ ಸಿಂಗ್ ಅವರು ಇದೇ ಮನೋರೋಗ ತಜ್ಞರ ಬಳಿಗೆ ಸಲಹೆ ಪಡೆದುಕೊಳ್ಳುತ್ತಿದ್ದರು ಎಂದು ತಿಳಿದು ಬಂದಿದೆ. ಶ್ರದ್ಧಾ ಕಪೂರ್ ಜೊತೆಛಿಛೋರೆ’ ಚಿತ್ರದಲ್ಲಿ ಕೊನೆಯ ಬಾರಿಗೆ ನಟಿಸಿದ್ದ ಸುಶಾಂತ್ ಅವರು ಕಳೆದ ಒಂದು ವರ್ಷದಿಂದ ಮಾಧ್ಯಮಗಳಿಂದ ದೂರವೇ ಉಳಿದಿದ್ದರು. ಸಹನಟಿ ಅಂಕಿತಾ ಲೋಕೊಂಡೆ ಜೊತೆ ಸಹಜೀವನ ನಡೆಸಿದ್ದ ಸುಶಾಂತ್ 2016ರಲ್ಲಿ ಈ ಬಂಧನ ಕಡೆದುಕೊಂಡಿದ್ದರು. ಇತ್ತೀಚೆಗೆ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯನ್ ಮೃತಪಟ್ಟಿದ್ದರು. ಈ ಬಗ್ಗೆ ತೀವ್ರವಾಗಿ ನೊಂದುಕೊಂಡಿದ್ದರು ಆಪ್ತರು ಹೇಳಿದ್ದಾರೆ.

Leave a Reply

Your email address will not be published. Required fields are marked *