ಹಂಪಿಗೆ ಪ್ರವಾಸಿಗರ ಎಂಟ್ರಿ!

ಬಳ್ಳಾರಿ: ವಿಶ್ವಪ್ರಸಿದ್ಧ ಹಂಪಿ ವೀಕ್ಷಣೆಗೆ ಇಂದಿನಿಂದ ಪ್ರವಾಸಿಗರಿಗೆ ಅವಕಾಶ ದೊರೆಯಲಿದೆ. ಕಳೆದ ಮೂರು ತಿಂಗಳಿಂದ ಪ್ರವಾಸಿಗರಿಗೆ ಮುಚ್ಚಿದ್ದ ಹಂಪಿಯ ಸ್ಮಾರಕಗಳು ಇಂದಿನಿಂದ ಮುಕ್ತವಾಗಲಿವೆ. ರಾಜ್ಯ ಸರ್ಕಾರ ಲಾಕ್ ಡೌನ್ ಸಡಿಲಗೊಳಿಸಿ ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಕಲ್ಪಿಸಿತ್ತು. ವಿಶ್ವ ಪಾರಂಪರಿಕ ತಾಣವಾದ ಹಂಪಿ ವೀಕ್ಷಿಸಲು ಅವಕಾಶವಿರಲಿಲ್ಲ. ಇದೀಗ ಹಂಪಿಯ ಸ್ಮಾರಕ ವೀಕ್ಷಿಸಲು ಜಿಲ್ಲಾಡಳಿತ ಕ್ಲಿಯರನ್ಸ್ ನೀಡಿದ ಹಿನ್ನಲೆ ಭಾರತೀಯ ಪುರಾತತ್ವ ಇಲಾಖೆ ಅನುಮತಿ ನೀಡಿದೆ. ಹಂಪಿ ಲಾಕ್ ಡೌನ್ ನಿಂದ ಮುಕ್ತಿ ಪಡೆದಂತಾಗಿದೆ.
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಮಾರ್ಚ್ 23ರಂದು ಲಾಕ್ ಡೌನ್ ಘೋಷಿಸಿದ ಬಳಿಕ ಮೂರು ತಿಂಗಳ ಕಾಲ ಹಂಪಿ ನೋಡಲು ಅವಕಾಶವಿರಲಿಲ್ಲ. ಇಲ್ಲಿಗೆ ಹೆಚ್ಚಿನ ಮಟ್ಟದಲ್ಲಿ ವಿದೇಶಿಗರು ಭೇಟಿ ನೀಡುತ್ತಿದ್ದ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಹಂಪಿಯೊಳಗೆ ಯಾರನ್ನೂ ಬಿಡದಂತೆ ಸೂಚನೆ ನೀಡಿತ್ತು. ಭಾರತೀಯ ಸರ್ವೇಕ್ಷಣಾ ಪುರಾತತ್ವ ಇಲಾಖೆ ಪ್ರವಾಸಿಗರಿಗೆ ಇದುವರೆಗೂ ನಿರ್ಬಂಧ ವಿಧಿಸಿತ್ತು.