ಹಾಸನ ಜಿಲ್ಲೆಯಲ್ಲಿ ಕೊರೊನಾಗೆ ಇಬ್ಬರ ಬಲಿ! ಚಾನೆಲ್ ಪತ್ರಕರ್ತರಿಗೂ ಸೋಂಕು!!

ಹಾಸನ: ಇಂದು ಜಿಲ್ಲೆಯಲ್ಲಿ ಇಬ್ಬರು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು ಸಾವಿನ ಸಂಖ್ಯೆ 13ಕ್ಕೇರಿದೆ. ನಗರದ ಹೊರವಲಯದ 48 ವರ್ಷದ ಮಹಿಳೆ ಸೋಕಿನಿಂದ ಅಸುನೀಗಿದ್ದಾರೆ. ರಕ್ತದೊತ್ತಡ, ಮಧುಮೇಹ ಹಾಗೂ ತೀವ್ರ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ಅವರು ನಿನ್ನೆ ಕೋವಿಡ್ ಅಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
<ಠಿ>ಶನಿವಾರ ಗಂಟಲದ್ರವದ ಪರೀಕ್ಷೆ ಟೆಸ್ಟ್ ಮಾಡಿಸಿದ್ದ ಪತ್ರಕರ್ತರಲ್ಲಿ ಇಬ್ಬರಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರಿಗೆ ಕ್ವಾರಂಟೈನ್ ನಲ್ಲಿರಲು ಸೂಚಿಸಲಾಗಿದೆ. ವಾರ್ತಾ ಇಲಾಖೆಯ ಕಚೇರಿ ಹಾಗೂ ಹಾಸನ ಪತ್ರಕರ್ತರ ಭವನಗಳನ್ನು ಮುಚ್ಚಿ ಸ್ಯಾನಿಟೈಸ್ ಮಾಡಲು ಜಿಲ್ಲಾಡಳಿತ ಸೂಚನೆ ನೀಡಿದೆ. ಎಲ್ಲ ಮಾಧ್ಯಮ ಪ್ರತಿನಿಧಿಗಳಿಗೆ ಮತ್ತೊಂದು ಸುತ್ತಿನ ಕೊರೋನ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಸುವರ್ಣ ನ್ಯೂಸ್ ವರದಿಗಾರ, ಬಿಟಿವಿ ಛಾಯಾಗ್ರಾಹಕಲ್ಲಿ ಸೋಂಕು ದೃಢಪಟ್ಟಿದ್ದು ಮೃತ ಸೋಂಕಿತರ ಶವಸಂಸ್ಕಾರ ಮತ್ತು ಕಂಟೈನ್ಮೆಂಟ್ ವಲಯದಲ್ಲಿ ಓಡಾಡಿದ್ದ ಹಿನ್ನೆಲೆಯಲ್ಲಿ ಸೋಂಕು ತಗಲಿರುವ ಶಂಕೆ ವ್ಯಕ್ತವಾಗಿದೆ. ಸೋಂಕಿತರ ಸಂಪರ್ಕದಲ್ಲಿದ್ದ ಹತ್ತಕ್ಕೂ ಹೆಚ್ಚು ಮಂದಿಯನ್ನು ನಗರದ ರೆಡ್ ಕ್ರಾಸ್ ಸಂಸ್ಥೆಯಲ್ಲಿ ಕ್ವಾರೇಂಟೈನ್ ಗೆ ಅವಕಾಶ ಮಾಡಿಕೊಡಲಾಗಿದೆ.

Leave a Reply

Your email address will not be published. Required fields are marked *