ಹಾಸನ ಜಿಲ್ಲೆಯಲ್ಲಿ ಮತ್ತೊಂದು ಕೊರೋನ ಸಾವು! ಮೃತರ ಸಂಖ್ಯೆ 5ಕ್ಕೆ ಏರಿಕೆ!!

ಹಾಸನ: ಜಿಲ್ಲೆಯಲ್ಲಿ ಮತ್ತೊಂದು ಕೊರೋನ ಸಾವು ಸಂಭವಿಸಿದೆ. ಇದರೊಂದಿಗೆ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಇಂದು ಚನ್ನರಾಯ ಪಟ್ಟಣದ 65 ವರ್ಷದ ಪುರುಷ ಸೋಂಕಿತ ಮೃತಪಟ್ಟಿದ್ದಾರೆ.
ಕಳೆದ‌ ರಾತ್ರಿ 12:45ಕ್ಕೆ ಖಾಸಗಿ ಆಸ್ಪತ್ರೆಯಿಂದ ರೆಫರ್ ಅಗಿ ಕೊವಿದ್ ಆಸ್ಪತ್ರೆಗೆ ಬಂದಿರುತ್ತಾರೆ. ಬೆಳಿಗ್ಗೆ 7:45 ಗಂಟೆಗೆ ಸಾವು ಸಂಭವಿಸಿದೆ. ಮೃತರು ಮಧುಮೇಹ ರೋಗದಿಂದ ಬಳಲುತ್ತಿದ್ದರು. ಸೋಂಕಿತರ ಸ್ವಾಬ್ ತೆಗೆಯಲಾಗಿತ್ತು .
ಕೊರೋನಾ ಪಾಸಿಟಿವ್ ಎಂದು ವರದಿ ಬಂದಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ ಕೃಷ್ಣಮೂರ್ತಿ ಹಾಗೂ ಜಿಲ್ಲಾ ಆರೋಗ್ಯ ‌ಮತ್ತು ಕಟುಂಬ ಕಲ್ಯಾಣ ಅಧಿಕಾರಿ ಡಾ ಸತೀಶ್ ತಿಳಿಸಿದ್ದಾರೆ

Leave a Reply

Your email address will not be published. Required fields are marked *