400ಕ್ಕೂ ಹೆಚ್ಚು ಕುಟುಂಬಗಳಿಗೆ ನಟ ಸೋನು ಸೂದ್ ನೆರವು

ಮುಂಬೈ: ವಲಸೆ ಕಾರ್ಮಿಕರಿಗೆ ಸಹಾಯಹಸ್ತ ಚಾಚುವ ಮೂಲಕ ಸುದ್ದಿಯಲ್ಲಿದ್ದ ಬಾಲಿವುಡ್ ನಟ ಸೋನು ಸೂದ್ ತಮ್ಮ ನೆರವು ಕಾರ್ಯವನ್ನು ಮುಂದುವರೆಸಿದ್ದಾರೆ. ಸಹಾಯ ಮಾಡುವ ವಿಚಾರದಲ್ಲಿ ಇದೀಗ ಒಂದು ಹೆಜ್ಜೆ ಮುಂದೆ ಹೋಗಿರುವ ಸೂದ್, ಕೊರೊನಾ ಪ್ರೇರಿತ ರಾಷ್ಟ್ರವ್ಯಾಪಿ ಲಾಕ್‍ಡೌನ್‍ನಿಂದಾಗಿ ಮೃತ ಮತ್ತು ಗಾಯಗೊಂಡಿರುವ ವಲಸೆ ಕಾರ್ಮಿಕರ 400ಕ್ಕೂ ಹೆಚ್ಚು ಕುಟುಂಬಗಳಿಗೆ ಆರ್ಥಿಕ ನೆರವು ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ನಟ ಸೋನು ಸೂದ್ ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಸೇರಿದಂತೆ ವಿವಿಧ ರಾಜ್ಯಗಳ ಅಧಿಕಾರಿಗಳನ್ನು ಸಂಪರ್ಕಿಸಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಕೊರೊನಾದಿಂದ ಮೃತ ವಲಸಿಗರ ಸಂಬಂಧಿತ ಮಾಹಿತಿ, ವಿಳಾಸ ಮತ್ತು ಬ್ಯಾಂಕ್ ವಿವರಗಳನ್ನು ಪಡೆದುಕೊಂಡಿದ್ದಾರೆ. ಮೃತ ಅಥವಾ ಗಾಯಗೊಂಡಿರುವ ವಲಸಿಗರ ಕುಟುಂಬಗಳಿಗೆ ಸುರಕ್ಷಿತ ಭವಿಷ್ಯವನ್ನು ಹೊಂದಲು ನಾನು ಅವರಿಗೆ ಸಹಾಯ ಮಾಡಲು ನಿರ್ಧರಿಸಿದ್ದೇನೆ. ಅವರನ್ನು ಬೆಂಬಲಿಸುವುದು ನನ್ನ ವೈಯಕ್ತಿಕ ಜವಾಬ್ದಾರಿ ಎಂದು ನಾನು ಭಾವಿಸುತ್ತೇನೆ” ಎಂದು ಸೋನು ಸೂದ್ ಹೇಳಿದರು. ಒಟ್ಟಿನಲ್ಲಿ ಸೋನು ಸೂದ್ ಕಾರ್ಯಕ್ಕೆ ನೆಟ್ಟಿಗರಿಂದ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಈ ಹಿಂದೆ ಸೋನು ಸೂದ್ ಅವರು ಕರ್ನಾಟಕ ಮತ್ತು ಮಹಾರಾಷ್ಟ್ರ ಸರ್ಕಾರಗಳ ಜೊತೆಗೆ ಚರ್ಚಿಸಿ ಕಲಬುರಗಿಯಿಂದ ಮಹಾರಾಷ್ಟ್ರದ ಥಾಣೆಗೆ ಬಂದಿದ್ದ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಲು ಅನುಮತಿ ಪಡೆದಿದ್ದರು. ಈ ಮೂಲಕ ತಮ್ಮ ಸ್ವಂತ ಖರ್ಚಿನಲ್ಲಿ ಒಟ್ಟು ಹತ್ತು ಬಸ್‍ಗಳ ವ್ಯವಸ್ಥೆ ಮಾಡಿ ಥಾಣೆಯಿಂದ ಕಲಬುರಗಿಗೆ ತಾವೇ ಮುಂದೆ ನಿಂತು ಕಳುಹಿಸಿಕೊಟ್ಟಿದ್ದ. ಅಷ್ಟೇ ಅಲ್ಲದೆ ವಲಸೆ ಕಾರ್ಮಿಕರಿಗೆ ಊಟದ ಕಿಟ್‍ಗಳನ್ನು ನೀಡಿ ಕನ್ನಡಿಗರ ಬಗ್ಗೆ ಕಾಳಜಿ ತೋರಿದ್ದರು.

Leave a Reply

Your email address will not be published. Required fields are marked *