ಆ.10ಕ್ಕೆ ಎಸ್ಸೆಸ್ಸೆಲ್ಸಿ ರಿಸಲ್ಟ್

ಬೆಂಗಳೂರು: ರಾಜ್ಯದಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಆಗಸ್ಟ್ 10ರ ಸೋಮವಾರ ಮಧ್ಯಾಹ್ನ 3ಗಂಟೆಗೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಸರಕಾರದ ವೆಬ್ ಸೈಟ್ ಮೂಲಕ ತಿಳಿದುಕೊಳ್ಳಬಹುದಾಗಿದೆ, ಶಿಕ್ಷಣ ಇಲಾಖೆ ಎಸ್ ಎಂ ಎಸ್ ಮೂಲಕವೂ ಪರೀಕ್ಷೆಯ ಫಲಿತಾಂಶವನ್ನು ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ರವಾನಿಸಲಿದೆ ಎಂದರು. ರಾಜ್ಯದಲ್ಲಿ ಈ ಬಾರಿ 8.5 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅವರ ಭವಿಷ್ಯ ಆ.10ಕ್ಕೆ ನಿರ್ಧಾರವಾಗಲಿದೆ.

Leave a Reply

Your email address will not be published. Required fields are marked *