`ಎಕ್ಕೂರು ಬಾಬಾ’ ಹೃದಯಾಘಾತಕ್ಕೆ ಬಲಿ!

ಮಂಗಳೂರು: ಶುಭಕರ ಶೆಟ್ಟಿ ಯಾನೆ ಎಕ್ಕೂರು ಬಾಬಾ ಇಂದು ಸಂಜೆ ಹೃದಯಾಘಾತದಿಂದ ನಿಧನರಾದರು. ಹಲವು ವರ್ಷಗಳ ಹಿಂದೆ ಭೂಗತ ಚಟುವಟಿಕೆಗಳಲ್ಲಿ ಪಾಲ್ಗೊಂಡು ಬಳಿಕ ಮನಪರಿವರ್ತನೆಗೊಂಡು ಸಮಾಜದ ಮುಖ್ಯವಾಹಿನಿಗೆ ಮರಳಿದ್ದರು. ಸಾಮಾಜಿಕ, ಧಾರ್ಮಿಕ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಎಕ್ಕೂರು ಬಾಬಾ ಅವರು ಸಾಮಾಜಿಕ ಚಟುವಟಿಕೆಗಳ ಮೂಲಕ ಹೆಸರು ಪಡೆದಿದ್ದರು. ಕೆಲಸಮಯದಿಂದ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು.

Leave a Reply

Your email address will not be published. Required fields are marked *