ಎಸ್ಸೆಸ್ಸೆಲ್ಸಿ ಫಲಿತಾಂಶ: ಉಡುಪಿ 7ನೇ ಸ್ಥಾನ, ದ.ಕ. ಜಿಲ್ಲೆಗೆ 12ನೇ ಸ್ಥಾನ!

ಬೆಂಗಳೂರು: ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು ಪ್ರಥಮ ಸ್ಥಾನವನ್ನು ಚಿಕ್ಕಬಳ್ಳಾಪುರ ಜಿಲ್ಲೆ ಪಡೆದರೆ, ದ್ವಿತೀಯ ಸ್ಥಾನವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ಪಡೆದುಕೊಂಡಿದೆ. ಉಡುಪಿ ಜಿಲ್ಲೆ 7ನೇ ಸ್ಥಾನ ಹಾಗೂ ದ.ಕ. ಜಿಲ್ಲೆ 12ನೆ ಸ್ಥಾನ ಪಡೆದಿದೆ.
ಎಂದಿನಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಸುಳ್ಯ ತಾಲೂಕು ಸುಬ್ರಹ್ಮಣ್ಯ ವಿದ್ಯಾನಗರದ ಕುಮಾರಸ್ವಾಮಿ ಪ್ರೌಢಶಾಲೆಯ ವಿದ್ಯಾರ್ಥಿ ಅನುಷ್ ಎ.ಎಲ್. 625ರಲ್ಲಿ 625 ಅಂಕ ಪಡೆದಿದ್ದು ರಾಜ್ಯದಲ್ಲಿ ಒಟ್ಟು 6 ಮಂದಿ ವಿದ್ಯಾರ್ಥಿಗಳು 625ರಲ್ಲಿ 625 ಅಂಕ ಪಡೆದಿದ್ದಾರೆ.