ಎಸ್ಸೆಸ್ಸೆಲ್ಸಿ: ರಾಜ್ಯದಲ್ಲಿ 6 ಜನರಿಗೆ ಪ್ರಥಮ ರ್ಯಾಂಕ್!

ಬೆಂಗಳೂರು: ಇಂದು ರಾಜ್ಯ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು ಆರು ಮಂದಿ ವಿದ್ಯಾರ್ಥಿಗಳಿಗೆ ಪ್ರಥಮ ರ್ಯಾಂಕ್ ಬಂದಿದೆ. ಸುಳ್ಯದ ವಿದ್ಯಾರ್ಥಿ ಅನುಶ್ ಸೇರಿದಂತೆ ಆರು ವಿದ್ಯಾರ್ಥಿಗಳು 625ರಲ್ಲಿ 625 ಅಂಕವನ್ನು ಪಡೆದಿದ್ದಾರೆ. ರಾಜ್ಯದಲ್ಲಿ 71.81 ಶೇ. ಫಲಿತಾಂಶ ಬಂದಿದೆ. ಕಳೆದ ಬಾರಿ ಶೇ.73.70 ರಷ್ಟು ಫಲಿತಾಂಶ ಬಂದಿತ್ತು. 52,219 ಮೌಲ್ಯಮಾಪಕರು ಸುಂಆರು 8 ಲಕ್ಷ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡಿದ್ದಾರೆ. ಜುಲೈ 14 ರಿಂದ ಮೌಲ್ಯಮಾಪನ ಆರಂಭವಾಗಿತ್ತು. ಬೆಂಗಳೂರು ನಗರ ಹಾಗೂ ಗ್ರಾಮಾಂತರದಲ್ಲಿ ಲಾಕ್ಡೌನ್ ಇದ್ದ ಕಾರಣ ಎರಡು ದಿನ ತಡವಾಗಿ ಆರಂಭವಾಗಿತ್ತು. 71.80 ಶೇಕಡಾವಾರು ಫಲಿತಾಂಶವಾಗಿದೆ. ಕಳೆದ ವರ್ಷ 73.70 ಫಲಿತಾಂಶವಾಗಿತ್ತು. 5,82,316 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸರ್ಕಾರಿ ಶಾಲೆಗಳ ಫಲಿತಾಂಶ ಶೇ. 72.79 ಅಷ್ಟಿದೆ. ಅನುದಾನಿತ ಶಾಲೆಗಳು 70.60, ಶೇ. 82.31, 2,28,734 ಅನುತ್ತೀರ್ಣ ರಾಗಿದ್ದಾರೆ. ಬಾಲಕರು ಶೇ.66.41 ಉತ್ತೀರ್ಣರಾಗಿದ್ದಾರೆ ಫಲಿತಾಂಶ ತಿಳಿಯಲು ಯಾವುದೇ ಸಂಖ್ಯೆಗೆ ವಿದ್ಯಾರ್ಥಿಗಳು ಎಸ್ಎಂಎಸ್ ಕಳುಹಿಸುವ ಅಗತ್ಯವಿಲ್ಲ. ಮಂಡಳಿಯೇ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಉಚಿತವಾಗಿ ಕಳಿಸಲಿದೆ. ನೆಟ್ ವರ್ಕ್ ಸಮಸ್ಯೆ ಆಗದಂತೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.